

ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು.
450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರ ವಿಮಾನವು ನೂತನ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಕಾರ್ಯಕ್ರಮಕ್ಕೂ ಮೊದಲು ಪಿಎಂ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಪ್ರತಿಕೃತಿಯನ್ನು ವೀಕ್ಷಿಸಿ ಮಾಹಿತಿ ಪಡೆದರು.
