

ಮಂಗಳೂರು: ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಪಕ್ಷ ತನ್ನ 2ನೇ ಪಟ್ಟಿಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದ್ದು, ಮಂಗಳೂರು (ಉಳ್ಳಾಲ) ಕ್ಷೇತ್ರದ ಉಮೇದುದಾರನಾಗಿ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಬೆಂಗಳೂರಿನ ಎ.ಕೆ.ಎಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಪೈಝಿ, ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷವು ಪರ್ಯಾಯ ರಾಜಕೀಯ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅವರು ಪಕ್ಷದ ಎರಡನೇ ಹಂತದ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ದ,ಕ ಜಿಲ್ಲೆಯ ಮಂಗಳೂರು (ಉಳ್ಳಾಲ) ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ, ರಿಯಾಝ್ ಫರಂಗಿಪೇಟೆ ಅವರು ಆಯ್ಕೆಯಾಗಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್. ಬಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.