

ಮಂಗಳೂರು: ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಸಿಬ್ಬಂದಿ ಹತ್ಯೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡಿನಲ್ಲಿ ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡದಿಂದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿ ಶಿಫಾಸ್ ಮಂಗಳೂರು ಪೊಲೀಸರಿಗೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರಿ ಹೆಸರಿನ ಶಾಪ್ನಲ್ಲಿ ಕೊಲೆ ಮಾಡಿದ್ದು, ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಹತ್ಯೆ ಮಾಡಲಾಗಿತ್ತು. ಮಾಲೀಕ ಕೇಶವ ಆಚಾರ್ಯ ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಕೊಲೆ ನಡೆದಿತ್ತು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನವೇ ಜ್ಯುವೆಲ್ಲರಿಯಲ್ಲಿದ್ದ ಚಿನ್ನಾಭರಣ ಮಿಸ್ಸಿಂಗ್ ಆಗಿತ್ತು.

