

ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ (BJP Youth Activist) ಪ್ರವೀಣ್ ನೆಟ್ಟಾರು (Parveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ತೌಫೀಲ್ ಬಂಧಿತ ಆರೋಪಿ. ಎನ್ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.


ಆರೋಪಿತನ ಹುಡುಕಾಟ ನಡೆಸಿದ್ದ ಎನ್ಐಎ ಅಧಿಕಾರಿಗಳು ಪತ್ತೆಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ನೋಟಿಸ್ ಕೂಡ ಅಂಟಿಸಿದ್ದರು. ತುಫೈಲ್ ಮಾಹಿತಿ ನೀಡಿದವರಿಗಾಗಿ ಐದು ಲಕ್ಷ ಬಹುಮಾನ ಕೂಡ ಘೋಷಿಸಲಾಗಿತ್ತು.