

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ದಿನಾಂಕ ಘೋಷಣೆಗೆ ರಾಜಕೀಯ ಪಕ್ಷಗಳು ಕಾಯುತ್ತಿವೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಈ ನಡುವೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನುಳಿದ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗುತ್ತಿದೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ 3 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 5 ರಂದು ಪ್ರಕಟಿಸಿದ್ದಾರೆ. ಬೆಳಗಾವಿ ಉತ್ತರದಿಂದ, ಲತೀಫ್ಖಾನ್ ಅಮೀರ್ಖಾನ್ ಪಠಾಣ್, ಹುಬ್ಬಳ್ಳಿ-ಧಾರವಾಡ ಪೂರ್ವದಿಂದ ದುರ್ಗಪ್ಪ ಕಾಶಪ್ಪ ಬಿಜವಾಡ ಮತ್ತು ಬಿಜಾಪುರ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಅಲ್ಲಾಬಕ್ಷ್ ಮೆಹಬೂಬ್ ಸಾಬ್ ಸ್ಪರ್ಧಿಸಲಿದ್ದಾರೆ. ಟಿಕೆಟ್ ಘೋಷಣೆ ಬೆನ್ನಲ್ಲೆ ದುರ್ಗಪ್ಪ ಕಾಶಪ್ಪ ಬಿಜವಾಡ ಬೃಹತ್ ಬೈಕ್ ರ್ಯಾಲಿ ನಡೆಸಿದ್ದಾರೆ. ಎಐಎಂಐಎಂ ಈ ಹಿಂದೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೂರೇಟ್ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು.
ಈ ಬಗ್ಗೆ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಾತನಾಡಿ ಓವೈಸಿ ಕಾರ್ನಾಟಕ ಮತ್ತು ರಾಜಸ್ಥಾನದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಮುಂದೆ ಅವರು ಎರಡು ರಾಜ್ಯ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
