

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿಟಿ ರವಿ (CT Ravi) ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿ ಭಾಗದಲ್ಲಿ ಸೀರೆ ಹಂಚಿದ್ದಾರೆ. ಸೀರೆ ಹಂಚುವ ವೇಳೆ ಮನೆಗೆ ಬಂದ ಮದ್ಯವ್ಯಸನಿಯೊಬ್ಬ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ. ರಸ್ತೆ ಮಧ್ಯೆ ಸೀರೆಯನ್ನು ಸುಟ್ಟು ಸೀರೆ ಹಂಚಲು ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಅಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾನೆ.

ಕೊರೊನಾ ಸಂದರ್ಭದಲ್ಲಿ ಒಂದು ಕೆಜಿ ಅಕ್ಕಿ ಕೊಟ್ಟಿಲ್ಲ. ಈಗ ಎಲೆಕ್ಷನ್ ಬಂತು ಅಂತ ಸೀರೆ ಹಂಚಲು ಬಂದಿದ್ದಾರಾ ಎಂದು ಹಳ್ಳಿಗರು ರೆಬೆಲ್ ಆಗಿದ್ದಾರೆ. ನಮಗೆ ಸೀರೆ ಬೇಡ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ನಮಗೆ ಸೂಕ್ತವಾದ ಮೂಲಭೂತ ಸೌಲಭ್ಯ ಬೇಕು ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ವ್ಯಕ್ತಿ 2-3 ಸೀರೆಗಳನ್ನು ರಸ್ತೆಗೆ ಎಸೆದು ಬೆಂಕಿ ಹಚ್ಚಿದ್ದಾನೆ. ಇದನ್ನು ಕಂಡ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Janrige bhuddi Bartha ide ..
He is done very good job 👏 ..
Politicians namge bhuddi illa ankkodidare
Janrige bhuddi Bartha ide ..
He is done very good job 👏 ..
Politicians namge bhuddi illa ankkodidare