


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ
ಗಡಿಯಾರ ಪ್ರಾಥಮಿಕ ಪ್ರೌಢಶಾಲೆಯಲ್ಲಿ 2004-05 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಸೀತಮ್ಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಶಿಕ್ಷಕಿ ಸುಚೇತ ಕಾರ್ಯಕ್ರಮ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗಾವಣೆಗೊಂಡಿರುವ ಮತ್ತು ನಿವೃತ್ತಿಗೊಂಡಿರುವ ಹನ್ನೆರಡರಷ್ಟು ಅಧ್ಯಾಪಕರುಗಳನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಅಧ್ಯಾಪಕರುಗಳು ವಿದ್ಯಾರ್ಥಿಗಳ ಈ ಕಾರ್ಯಕ್ರಮ ಇಡೀ ರಾಜ್ಯಕ್ಕೆ ಮಾದರಿಯಾಗಬೇಕಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಂಕರ್ ಭಟ್ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಇಬ್ರಾಹೀಂ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿಗಳ ಪರವಾಗಿ ಸ್ವಾದಿಖ್ ಸಖಾಫಿ ಮತ್ತು ಪ್ರಜ್ವಲ್ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕುಹಾಕಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ಅಧ್ಯಾಪಕರಾದ ಗಿರಿಯಪ್ಪ, ರಾಮಚಂದ್ರ, ರಾಜೀವ್, ಸೀತಮ್ಮ, ಶ್ಯಾಮಲ, ವೀಣಾ, ಜಾನಕಿ, ವಾಣಿ, ಯಶೋಧಾ, ವಿತಾ ಇವರು ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಅಬ್ದುಲ್ ಅಝೀಝ್ ಸ್ವಾಗತಿಸಿದರು ಅಲ್ತಾಫ್ ವಂದಿಸಿದರು. ಮುಸ್ತಫಾ ಕಾರ್ಯಕ್ರಮ ನಿರೂಪಣೆ ಮಾಡಿದರು.

