Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

Pre-Poll Survey: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ಲಸ್; ಲೋಕ್​ ಪೋಲ್ ಸಮೀಕ್ಷೆ

editor tv by editor tv
March 11, 2023
in ರಾಜ್ಯ, ಸುದ್ದಿ
0
Pre-Poll Survey: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ಲಸ್; ಲೋಕ್​ ಪೋಲ್ ಸಮೀಕ್ಷೆ
1.9k
VIEWS
Share on FacebookShare on TwitterShare on Whatsapp

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ‘ಲೋಕ್​ ಪೋಲ್’ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟ ಬಹುಮತ ದೊರೆಯಲಿದೆ ಹಾಗೂ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ‘ಲೋಕ್​ ಪೋಲ್ (Lok Poll)’ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ (Pre-poll survey) ತಿಳಿಸಿದೆ. ಆಡಳಿತಾರೂಢ ಬಿ. ಜೆ. ಪಿ.2018ರಲ್ಲಿ ಪಡೆದದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸಿದ್ದು, ಸಮೀಕ್ಷಾ ವರದಿಯ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಇದರ ಪ್ರಕಾರ, ಕಾಂಗ್ರೆಸ್​​ಗೆ ಶೇ 39ರಿಂದ 42ರ ಮತ ಹಂಚಿಕೆಯೊಂದಿಗೆ 116ರಿಂದ 122 ಸ್ಥಾನ ದೊರೆಯಲಿದೆ. ಬಿಜೆಪಿಗೆ 77ರಿಂದ 83 ಹಾಗೂ ಜೆಡಿಎಸ್​​ 21ರಿಂದ 27 ಸ್ಥಾನ ಗಳಿಸಲಿವೆ. ಪಕ್ಷೇತರರು ಮತ್ತು ಸ್ವತಂತ್ರ ಅಭ್ಯರ್ಥಿಗಳು ಶೇ 6ರಿಂದ 9ರ ಮತ ಹಂಚಿಕೆಯೊಂದಿಗೆ 1ರಿಂದ 4 ಸ್ಥಾನ ಪಡೆಯುವ ಸಾಧ್ಯತೆ ಇದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ 10ರಿಂದ 13 ಸ್ಥಾನ ಪಡೆಯಬಹುದು ಎಂದು ಸಮೀಕ್ಷಾ ವರದಿ ತಿಳಿಸಿದೆ. ಕಾಂಗ್ರೆಸ್ 21ರಿಂದ 24 ಸ್ಥಾನ ಪಡೆದರೆ ಜೆಡಿಎಸ್ 14ರಿಂದ 17 ಸ್ಥಾನ ಪಡೆಯಬಹುದು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಗರಿಷ್ಠ, 24ರಿಂದ 27 ಕಡೆ ಗೆಲುವು ದೊರೆಯಲಿದೆ. ಬಿಜೆಪಿಗೆ 9ರಿಂದ 13 ಮತ್ತು ಜೆಡಿಎಸ್ 0-2 ಹಾಗೂ ಇತರರು 0-2 ಸ್ಥಾನ ಪಡೆಯಬಹುದು ಎಂದು ಸಮೀಕ್ಷಾ ವರದಿ ಹೇಳಿದೆ.

After 2 months on the ground,
45,000 samples across 224 constituencies.

Here we present you the
Mega #Karnataka Prepoll survey.

Projected seats:
▪️BJP 77 – 83
▪️INC 116 – 122
▪️JDS 21 – 27
▪️OTH 1 – 4#KarnatakaElections2023 #AssemblyElections2023 #KarnatakaElection pic.twitter.com/UuSZDWl5W2

— Lok Poll (@LokPoll) March 10, 2023

ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್​ಗೆ 19-23, ಬಿಜೆಪಿಗೆ 11-14 ಹಾಗೂ ಜೆಡಿಎಸ್​ಗೆ 1-4 ಸ್ಥಾನ ದೊರೆಯಬಹುದು ಎಂದು ಸಮೀಕ್ಷೆ ಹೇಳಿದೆ. ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಬಲ ನೆಲೆ ವಿಸ್ತರಿಸಲಿದೆ. ಈ ಪ್ರದೇಶದಲ್ಲಿ ಕೇಸರಿ ಪಾಳೆಯವು 27-30 ಸ್ಥಾನ ಪಡೆದರೆ, ಕಾಂಗ್ರೆಸ್​ 19-22, ಜೆಡಿಎಸ್ 0-1 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ತಿಳಿಸಿದೆ.

ಬಿಜೆಪಿ ಭದ್ರಕೋಟೆ ಕರಾವಳಿಯಲ್ಲಿ ಯಾರಿಗೆ ಹೆಚ್ಚು ಸ್ಥಾನ?

ಬಿಜೆಪಿಯ ಭದ್ರ ಕೋಟೆ ಎಂದೇ ಪರಿಗಣಿಸಲಾಗಿರುವ ಕರಾವಳಿ ಕರ್ನಾಟಕ ಭಾಗದಲ್ಲಿ ಆಡಳಿತಾರೂಢ ಪಕ್ಷಕ್ಕೆ 14-17 ಸ್ಥಾನ, ಕಾಂಗ್ರೆಸ್​ಗೆ 7-10 ಸ್ಥಾನ ಹಾಗೂ ಜೆಡಿಎಸ್​​ಗೆ 0-1 ಸ್ಥಾನ ದೊರೆಯಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ. ಮಧ್ಯ ಕರ್ನಾಟಕದಲ್ಲಿ ಬಿಜೆಪಿಗೆ 10-13, ಕಾಂಗ್ರೆಸ್​ಗೆ 7-10 ಹಾಗೂ ಜೆಡಿಎಸ್​ಗೆ 0-1 ಸ್ಥಾನ ದೊರೆಯಬಹುದು.

ಜನವರಿ 15ರಿಂದ ಫೆಬ್ರುವರಿ 28ರ ನಡುವಣ ಅವಧಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ತಲಾ 224 ಮಂದಿಯಂತೆ ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದು ‘ಲೋಕ್ ಪೋಲ್’ ತಿಳಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ 30 ಮತಗಟ್ಟೆ ವ್ಯಾಪ್ತಿಗಳನ್ನು ಬಳಸಿಕೊಂಡು ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಒಟ್ಟು 45,000 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.

ಭ್ರಷ್ಟಾಚಾರ, ಹೆಚ್ಚುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಮತ್ತು ನಿಧಾನಗತಿಯ ಆರ್ಥಿಕ ಬೆಳವಣಿಗೆ ಆಡಳಿತ ವಿರೋಧಿ ಅಲೆಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಮೀಕ್ಷಾ ವರದಿ ಉಲ್ಲೇಖಿಸಿದೆ.

Previous Post

Karnataka Assembly Election: ಇವಿಎಂ ದುರುಪಯೋಗ ಸಾಧ್ಯವಿಲ್ಲ, ಬದಲಾವಣೆಯೂ ಇಲ್ಲ; ಚುನಾವಣಾ ಆಯೋಗ

Next Post

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಣಕ್ಕಿಳಿಯಲು ಎಸ್‌ಡಿಪಿಐ ಸಿದ್ಧತೆ..!

Next Post
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಣಕ್ಕಿಳಿಯಲು ಎಸ್‌ಡಿಪಿಐ ಸಿದ್ಧತೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಣಕ್ಕಿಳಿಯಲು ಎಸ್‌ಡಿಪಿಐ ಸಿದ್ಧತೆ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.