Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಕಣಚೂರು ಯು.ಕೆ.ಮೋನು ಸೇರಿದಂತೆ ಮೂವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

editor tv by editor tv
March 15, 2023
in ರಾಜ್ಯ, ಸುದ್ದಿ
0
ಕಣಚೂರು ಯು.ಕೆ.ಮೋನು ಸೇರಿದಂತೆ ಮೂವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ, ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನುಆದಷ್ಟು ಬೇಗನೆ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ವೇಗ ತುಂಬುವುದು ಇದರ ಇದ್ದೇಶ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.
ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆದ 41ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಎಲ್ಲಾ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ತಜ್ಞರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ದೇಶದಲ್ಲಿ ಕರ್ನಾಟಕ ಜಾರಿ ಮಾಡಿರುವುದು ಸಂತೋಷದ ವಿಚಾರ, ಎಂದರು.
ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ ನಿರ್ದೇಶಕ ಪ್ರೊ. ಎಸ್. ಸಿ. ಶರ್ಮ, ವಿಶ್ವವಿದ್ಯಾನಿಲಯ ಶಿಕ್ಷಣದ ಪರಿಕಲ್ಪನೆ ನಾವು ಅರ್ಥಮಾಡಿಕೊಳ್ಳಬೇಕು ಎಂಬುದು ರಾಷ್ಟೀಯ ಶಿಕ್ಷಣ ನೀತಿಯ ಆಶಯ. ಅದು ನಮ್ಮ ಬಹುಕಾರ್ಯ ಸಾಮಥ್ರ್ಯವನ್ನು ಹೆಚ್ಚಿಸಬೇಕು. ಪರಿಸರದೆಡೆಗೆ ಸ್ವಾರ್ಥರಹಿತ ಕಾಳಜಿ ನಮ್ಮಲ್ಲಿ ಬೆಳೆಯಬೇಕು. ಮಾನವೀಯ ಗುಣ ಮತ್ತು ಮಾನವಿಕ ಶಾಸ್ತ್ರದ ಅಧ್ಯಯನ ಇದಕ್ಕೆ ಅಗತ್ಯ. ನಮ್ಮಪ್ರಾಚೀನ ಜ್ಞಾನದ ಅರಿವು, ನಮ್ಮ ಸಂಸ್ಕøತಿಯ ಶ್ರೀಮಂತಿಯ ಉಳಿವು, ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ಒಳ್ಳೆಯ ಅಂಶಗಳ ತಿಳಿವು ಬೇಕಾಗಿದೆ. ನಮ್ಮ ಅಧ್ಯಯನ ಪ್ರಾಯೋಗಿಕವಾಗಿರರಬೇಕು, ಹೊರ ಪ್ರಪಂಚವನ್ನು ಹೆಚ್ಚು ಅರಿಯುವಂತಿರಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ವಿಶ್ವವಿದ್ಯಾನಿಲಯದ ಸಾಧನೆ, ಗುರಿಗಳನ್ನು ವಿವರಿಸಿ ಅತಿಥಿಗಳನ್ನು ಸ್ವಾಗತಿಸಿದರು.
ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ, ಕುಲಸಚಿವ (ಪರೀಕ್ಷಾಂಗ) ಪ್ರೊ. ರಾಜು ಕೃಷ್ಣ ಚಲನ್ನವರ್, ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ನಿಖಾಯಗಳ ಡೀನ್ಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು. ಪ್ರಾಧ್ಯಾಪಕರುಗಳಾದ ಡಾ. ಧನಂಜಯ ಕುಂಬ್ಳೆ ಮತ್ತು ಪ್ರೀತಿ ಕೀರ್ತಿ ಡಿʼಸೋಜ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ 7 ಮಂದಿ ವಿದೇಶಿಗರೂ ಸೇರಿದಂತೆ 115 ಮಂದಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಲಾಯಿತು. 55 ಮಂದಿಗೆ ಚಿನ್ನದ ಪದಕ, 57 ನಗದು ಬಹುಮಾನ ವಿತರಿಸಲಾಯಿತು. 199 ಮಂದಿ ರಾಂಕ್ ವಿಜೇತರಲ್ಲಿ ಪ್ರಥಮ ರಾಂಕ್ ಪಡೆದ 71 ಮಂದಿಗೆ ರಾಜ್ಯಪಾಲರು ರಾಂಕ್ ಪ್ರಮಾಣ ಪತ್ರ ನೀಡಿದರು. ಶೈಕ್ಷಣಿಕ ವರ್ಷ 2021-22 ರಲ್ಲಿ ಶೇಕಡಾ 82.72 ಪಲಿತಾಂಶ ದಾಖಲಾಗಿದೆ.

ಈ ಸಂದರ್ಭದಲ್ಲಿ ಮಂಗಳೂರು ವಿವಿಯ 41ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆಗೈದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಯಿತು.
ಶಿಕ್ಷಣ ಮತ್ತು ಸಮಾಜಸೇವೆಯಲ್ಲಿ ಮಾಡಿದ ಸಾಧನೆಗಾಗಿ ಮಂಗಳೂರಿನ ಕಣಚೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್’ನ ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕ ಹಾಜಿ ಯು.ಕೆ.ಮೋನು, ಕೃಷಿ, ಶಿಕ್ಷಣ ಮತ್ತು ಸಮಾಜಸೇವೆಗಾಗಿ ಉದ್ಯಮಿ ಜಿ ರಾಮಕೃಷ್ಣ ಆಚಾರ್ ಹಾಗೂ ಶಿಕ್ಷಣ ಮತ್ತು ಸಮಾಜಸೇವೆಗಾಗಿ ರಾಜ್ಯೋತ್ಸವ ಪುರಸ್ಕಾರ ಪುರಸ್ಕೃತ ಪ್ರೊ. ಎಂ.ಬಿ.ಪುರಾಣಿಕ್ ಅವರು ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.

Previous Post

DK Shivakumar: ಬಿಜೆಪಿ ಸರ್ಕಾರವನ್ನು ರಕ್ಷಿಸುತ್ತಿರುವ ನಾಲಾಯಕ್ ಡಿಜಿಪಿ ಪ್ರವೀಣ್ ಸೂದ್; ಡಿಕೆಶಿ ಕೆಂಡಾಮಂಡಲ

Next Post

ಹಿಂದೂ ಮಹಾಸಾಗರದಲ್ಲಿ ಮುಳುಗಿದ ವಲಸಿಗರ ದೋಣಿ – 34 ಮಂದಿ ಸಾವು

Next Post
ಹಿಂದೂ ಮಹಾಸಾಗರದಲ್ಲಿ ಮುಳುಗಿದ ವಲಸಿಗರ ದೋಣಿ – 34 ಮಂದಿ ಸಾವು

ಹಿಂದೂ ಮಹಾಸಾಗರದಲ್ಲಿ ಮುಳುಗಿದ ವಲಸಿಗರ ದೋಣಿ – 34 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.