

ತಮ್ಮ ನೇರ ಹೇಳಿಕೆ, ಸಿದ್ಧಾಂತಗಳ ಮೂಲಕ ‘ಆ ದಿನಗಳು ಚೇತನ್’ (Aa Dingalu Chetan) ಸುದ್ದಿ ಆಗುತ್ತಾ ಇರುತ್ತಾರೆ. ಅವರಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಈಗ ಅವರು ಮತ್ತೆ ಅರೆಸ್ಟ್ ಆಗಿದ್ದಾರೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ Chethan ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು.ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡುವ ಕಾರ್ಯ ಆಗಿದೆ. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಚೇತನ್ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಚೇತನ್ ಟ್ವೀಟ್ನಲ್ಲೇನಿದೆ?
‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು.
1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು.
ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ’ ಎಂದು ಅವರು ಬರೆದುಕೊಂಡಿದ್ದರು.
Hindutva is built on LIES
Savarkar: Indian ‘nation’ began when Rama defeated Ravana & returned to Ayodhya —> a lie
1992: Babri Masjid is ‘birthplace of Rama’ —> a lie
2023: Urigowda-Nanjegowda are ‘killers’ of Tipu—> a lie
Hindutva can be defeated by TRUTH—> truth is EQUALITY pic.twitter.com/0Yjz4x1aea
ಕಳೆದ ವರ್ಷವೂ ಅರೆಸ್ಟ್ ಆಗಿದ್ದ ಚೇತನ್..
ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಚೇತನ್ ಕುಮಾರ್ ಅವರು ಅರೆಸ್ಟ್ ಆಗಿದ್ದರು. ಚೇತನ್ ಟ್ವೀಟ್ ಒಂದನ್ನು ಮಾಡಿದ್ದರು. ಹಿಜಾಬ್ ವಿಚಾರವನ್ನು ಪ್ರಸ್ತಾಪಿಸುತ್ತಾ ಹೈಕೋರ್ಟ್ ಜಡ್ಜ್ ಒಬ್ಬರ ವಿರುದ್ಧ ಅಕ್ಷೇಪಾರ್ಹ ವ್ಯಾಖ್ಯಾನ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಬಂಧನ ಆಗಿತ್ತು. ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.