

ದಕ್ಷಿಣ ಕನ್ನಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಆಮ್ ಆದ್ಮಿ ಪಾರ್ಟಿ (Aam Aadmi Party) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದಲೇ 3 ಅಭ್ಯರ್ಥಿಗಳು ಕಣಕ್ಕೆ ಇಳಿಸುತ್ತಿದೆ. ಮಂಗಳೂರು ನಗರ ದಕ್ಷಿಣ, ಮುಲ್ಕಿ-ಮೂಡಬಿದರೆ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಮಂಗಳೂರು ನಗರ ದಕ್ಷಿಣ ದಿಂದ ಸಂತೋಷ್ ಕಾಮತ, ಮುಲ್ಕಿ-ಮೂಡಬಿದರೆಯಿಂದ ವಿಜಯನಾಥ ವಿಠಲ ಶೆಟ್ಟಿ, ಸುಳ್ಯದಿಂದ ಸುಮನಾ ಸ್ಪರ್ಧಿಸುತ್ತಿದ್ದಾರೆ.

ಕರ್ನಾಟಕ ರಾಜಕೀಯದಲ್ಲೂ ಆಪ್ ಎಂಟ್ರಿ ಕೊಟ್ಟಿದ್ದು, ಇತ್ತೀಚಿಗೆ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಈ ಬಗ್ಗೆ ದಕ್ಷಿಣ ಕನ್ನಡ ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಅಶೋಕ್ ಅಡಮಲೆ ಮಾತನಾಡಿ ದಕ್ಷಿಣ ಕನ್ನಡದಿಂದ ಮೂವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 224 ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಹೇಳಿದರು. ಇನ್ನುಳಿದ 100 ಜನರ ಪಟ್ಟಿಯನ್ನು ಮಾರ್ಚ್ 27 ರಂದು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
