

ಮಂಗಳೂರು: ಇಲ್ಲಿನ ಕಂಕನಾಡಿ ಠಾಣಾ ವ್ಯಾಪ್ತಿಯ ಮರೋಳಿಯಲ್ಲಿ ಹೋಳಿ ಪ್ರಯುಕ್ತ ರಂಗ್ ದೇ ಬರ್ಸಾ ಹೆಸರಿನ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿ ದಾಂದಲೇ ನಡೆಸಿದ ಘಟನೆ ರವಿವಾರ ನಡೆದಿದೆ.
ಮರೋಳಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಸಿನೆಮಾ ಕುಣಿತ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಬಜರಂಗ ದಳ ಕಾರ್ಯಕರ್ತರಿಂದ ಕಾರ್ಯಕ್ರಮಕ್ಕೆ ದಾಳಿ ನಡೆಸಿ ಅಡ್ಡಿಪಡಿಸಿದ್ದಾರೆಂದು ವರದಿಯಾಗಿದೆ.


ಒಟ್ಟು 6 ಮಂದಿ ಹೋಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದರು. ನಾವು ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಕೆಲವು ಪೋಸ್ಟರ್ ಗಳಿಗೆ ಹಾನಿಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಹೇಳಿದ್ದಾರೆ..
