

ಚಿಕ್ಕಮಗಳೂರು: ಜೀಪ್ಗೆ ಕಾರು ಡಿಕ್ಕಿ (Jeep And Car Accident) ಹೊಡೆದು ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ (AIT Circle) ಬಳಿ ನಡೆದಿದೆ. ಅಪಘಾತದ ವೇಳೆ ಕಾರು ಪರಿಶೀಲಿಸಿದ ಸ್ಥಳೀಯರು ಶಾಕ್ ಕೂಡ ಆಗಿದ್ದಾರೆ. ಇದಕ್ಕೆ ಕಾರಣ, ಲಕ್ಷಾಂತರ ಮೌಲ್ಯದ ಮದ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಅವರ ಭಾವಚಿತ್ರ ಇರುವ ಕ್ಯಾಲೆಂಡರ್ಗಳು ಪತ್ತೆಯಾಗಿರುವುದು. ಕರ್ನಾಟಕ ಚುನಾವಣೆ ಹೊತ್ತಲ್ಲೇ ಲಕ್ಷಾಂತರ ಮೌಲ್ಯದ ಮಾಲ್ಗಳು ಪತ್ತೆಯಾಗಿರುವುದರಿಂದ ಆಕ್ರೋಶಗೊಂಡ ಕೆಲವು ಸ್ಥಳೀಯರು ಸಿಟಿ ರವಿ ವಿರುದ್ಧ ಒಟಿ ರವಿ ಎಂದು ಘೋಷಣೆ ಕೂಗಿದ್ದಾರೆ.

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ಬಳಿ ಜೀಪ್ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಘಟನೆ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಹಿಡಿದ ಸ್ಥಳೀಯರು ಕಾರು ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಮದ್ಯದ ಬಾಟಲಿಗಳು ಹಾಗೂ ಸಿ.ಟಿ.ರವಿ ಭಾವ ಚಿತ್ರಗಳಿರುವ ನೂರಾರು ಕ್ಯಾಲೆಂಡರ್ಗಳು ಪತ್ತೆಯಾಗಿವೆ

.ಕಾರಿನಲ್ಲಿ ಮದ್ಯ ಪತ್ತೆಯಾದ ಹಿನ್ನೆಲೆ OT ರವಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಕಾರು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಐಟಿ ಸರ್ಕಲ್ ಬಳಿ ನೂರಾರು ಸ್ಥಳೀಯರು ಜಮಾಯಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ನಗರ ಪೋಲಿಸ್ ಠಾಣೆಯ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.