

ಆಧಾರ್ ಕಾರ್ಡ್, ಪಾನ್ ಕಾರ್ಡ್ ಲಿಂಕ್ ಮಾಡಲು(pan Aadhaar link) ಇದೇ ಮಾರ್ಚ್ 31ರಂದು ಕೊನೇ ದಿನವಾಗಿದೆ. ಆಧಾರ್ ನಂಬರ್ ಮತ್ತು ಪಾನ್ ಕಾರ್ಡ್ ಜೋಡಣೆಗೆ ಇನ್ನು 4 ದಿನಗಳು ಮಾತ್ರ ಬಾಕಿ ಇದ್ದು, ಈ ಅವಧಿಯೊಳಗೆ ಜೋಡಣೆಯಾಗದಿದ್ದರೆ ಪಾನ್ ಕಾರ್ಡ್ ಅಮಾನ್ಯವಾಗಲಿದೆ. ಜೊತೆಗೆ ಬ್ಯಾಂಕ್ ವ್ಯವಹಾರಗಳು ಕೂಡಾ ಸಾಧ್ಯವಾಗದು. ಅಲ್ಲದೇ ತೆರಿಗೆ ಪಾವತಿಸುವಾಗ ಹೆಚ್ಚುವರಿಯಾಗಿ ಶೇ.10 ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಹೀಗಾಗಿ ಆಧಾರ್, ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್ ಸೆಂಟರ್ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್ ಮಾಡಿಸುತ್ತಿದ್ದಾರೆ, ಇದನ್ನೇ ಕೆಲ ಸೈಬರ್ ಸೆಂಟರ್ಗಳು ಬಂಡವಾಳ ಮಾಡಿಕೊಂಡಿವೆ. ಬೇರೆ ಬೇರೆ ವೆಬ್ಸೈಟ್ಗಳಲ್ಲಿ ಪಾನ್ ಹಾಗೂ ಆಧಾರ್ ಲಿಂಕ್ ಮಾಡುತ್ತಿದ್ದಾರೆ. 1 ಸಾವಿರ ಶುಲ್ಕದ ಜೊತೆಗೆ ಸೈಬರ್ ಸೆಂಟರ್ ಮಾಲೀಕರು ಜೊತೆಗೆ ಪ್ರೊಸೆಸಿಂಗ್ ಶುಲ್ಕ ಎಂದು 500 ರೂಪಾಯಿ ಹೆಚ್ಚುವರಿ ವಸೂಲಿ ಮಾಡಲಾಗುತ್ತಿದೆ. ಪ್ಯಾನ್ ಅನ್ನು ಆಧಾರ್ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಇಲಾಖೆಯು ತೆರಿಗೆದಾರರಿಗೆ ತನ್ನ ವೆಬ್ಸೈಟ್ನಲ್ಲಿ ಲಿಂಕ್ಗಳನ್ನು ನೀಡಿದೆ. ಹಾಗಾದ್ರೆ, ಪ್ಯಾನ್ ಅನ್ನು ಆಧಾರ್ಗೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಪರಿಶೀಲಿಸುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಪ್ಯಾನ್ ಅನ್ನು ಆಧಾರ್ಗೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಪರಿಶೀಲಿಸುವುದು ಹೇಗೆ?
- ಹಂತ 1: ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್ಗೆ ಭೇಟಿ ನೀಡಿ https://www.incometax.gov.in/iec/foportal/
- ಹಂತ 2: ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.
- ಹಂತ 3: ನಿಮ್ಮ 10 ಡಿಜಿಟ್ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ
- ಹಂತ 4: ನಿಮ್ಮ 12 ಡಿಜಿಟ್ನ ಆಧಾರ್ ಸಂಖ್ಯೆಯನ್ನು ನಮೂದಿಸಿ
- ಹಂತ 5: View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.
ಎಸ್ಎಂಎಸ್ ವಿಧಾನದ ಮೂಲಕವೂ ಆಧಾರ್ ಲಿಂಕ್ ಸ್ಟೇಟಸ್ ತಿಳಿಯಿರಿ
ಆಧಾರ್ ಲಿಂಕ್ ಸ್ಟೇಟಸ್ ತಿಳಿಯಲು ಇನ್ನೊಂದು ವಿಧಾನ ನೀವು ಎಸ್ಎಂಎಸ್ ಮೂಲಕವೂ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿದುಕೊಳ್ಳಬಹುದು. ಎಸ್ಎಂಎಸ್ ಮೂಲಕ ತಿಳಿಯಲು ನೀವು 567678 ಅಥವಾ 56161ಗೆ ಎಸ್ಎಂಎಸ್ ಮಾಡಬೇಕಾಗುತ್ತದೆ. UIDPAN ಎಂದು ಟೈಪ್ ಮಾಡಿ ಒಂದು ಸ್ಪೇಸ್ ನೀಡಿ ಬಳಿಕ 12 ಡಿಜಿಟ್ನ ಆಧಾರ್ ಸಂಖ್ಯೆಯನ್ನು ಟೈಪ್ ಮಾಡಿ, ಒಂದು ಸ್ಪೇಸ್ ನೀಡಬೇಕು. ಅದಾದ ಬಳಿಕ ಪ್ಯಾನ್ ಸಂಖ್ಯೆಯನ್ನು ನಮೂದಿಸಿ 567678 ಅಥವಾ 56161ಗೆ ಎಸ್ಎಂಎಸ್ ಕಳುಹಿಸಬೇಕು.

ಆಧಾರ್ ಮತ್ತು ಪಾನ್ ಲಿಂಕ್ ಮಾಡುವುದು ಹೇಗೆ?
- ಆದಾಯ ತೆರಿಗೆ ಇಲಾಖೆಯ ವೆಬ್ಸೈಟ್ https://www.incometax.gov.in/iec/foportal/ ಗೆ ಭೇಟಿ ನೀಡಿ.
- ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ
- ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ
- ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.
- ಈ ಪ್ರಕ್ರಿಯೆಯನ್ನು ನೀವು ಇನ್ಕಮ್ ಟ್ಯಾಕ್ಸ್ ವೆಬ್ಸೈಟ್ಗೆ ಲಾಗಿನ್ ಅಗದೆಯೇ ಪಡೆಯಬಹುದಾದ ಸೇವೆ.

