Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ರಾಜ್ಯ ವಿಧಾನಸಭೆ ಚುನಾವಣೆ ಮೇ 10 ರಂದು ಒಂದೇ ಹಂತದ ಮತದಾನ ,ಮೇ 13 ರಂದು ಫಲಿತಾಂಶ

editor tv by editor tv
March 29, 2023
in ರಾಜ್ಯ, ಸುದ್ದಿ
0
ರಾಜ್ಯ ವಿಧಾನಸಭೆ ಚುನಾವಣೆ   ಮೇ 10 ರಂದು ಒಂದೇ ಹಂತದ ಮತದಾನ ,ಮೇ 13 ರಂದು ಫಲಿತಾಂಶ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ (Karnataka Vidhanasabha Election 2023) ಯ ದಿನಾಂಕ ಘೋಷಣೆಯಗಿದೆ.ಮೇ 10 ರಂದು ಒಂದೇ ಹಂತದ ಮತದಾನ ನಡೆಯಲಿದೆ, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಸದ್ಯ ಕರ್ನಾಟಕ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು  ಹೇಳಿದರು.

2023ರ ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು. ಮೇ 24ಕ್ಕೆ ವಿಧಾನಸಭೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ.  ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ.  ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.

58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದೆ. ಹೀಗಾಗಿ ಈ ಬಾರಿ ಮತದಾನ ಹೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು, ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಹಳಷ್ಟು ಐಟಿ ಕಂಪನಿಗಳು ಇದಕ್ಕೆ ಸಹಕಾರ ನೀಡುತ್ತಿವೆ.

ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.

ರಾಜೀವ್ ಕುಮಾರ್ ಜೊತೆಗೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್, ಅನುಪ್ ಚಂದ್ರ ಪಾಂಡೆ, ನಿತೇಶ್ ವೈಷ್ಯ, ಧರ್ಮೇಂದ್ರ ಶರ್ಮಾ ಮತ್ತಿತರರು ಭಾಗಿಯಾಗಿದ್ದಾರೆ.

Previous Post

ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು

Next Post

ದಕ್ಷಿಣ ಕನ್ನಡ: ಮಸೀದಿ ನಿರ್ಮಾಣಕ್ಕೆ ಮರ ಮಟ್ಟು ನೀಡಿದ ಹಿಂದೂ ಬಾಂಧವರು, ಸೌಹಾರ್ದತೆ ಸಾರಿದ ನವೀಕೃತ ಜುಮ್ಮಾ ಮಸೀದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.