

ಅದ್ಯಾವ ಭಾಗ್ಯ ಇವರನ್ನು ಅರಸಿ ಬಂದಿತೋ ಗೊತ್ತಿಲ್ಲ , ಬಂಟ್ವಾಳದ ಈ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು, ಅದಕ್ಕಾಗಿ ಬುಧವಾರ ದೆಹಲಿಯತ್ತ ಹೊರಟಿದ್ದಾರೆ.
ಬಂಟ್ವಾಳ (ಮಾ.30) : ಬಂಟ್ವಾಳದ ಈ ಮೂವರು ಮಹಿಳೆಯರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳ ಜೊತೆ ಸಂವಾದ ನಡೆಸುವ ಸೌಭಾಗ್ಯ ಪಡೆದುಕೊಂಡಿದ್ದು, ಅದಕ್ಕಾಗಿ ಬುಧವಾರ ದೆಹಲಿಯತ್ತ ಹೊರಟಿದ್ದಾರೆ.
ದಕ್ಷಿಣ ಕನ್ನಡ(Dakshina kannada) ಜಿಲ್ಲೆಯಿಂದ ಆಯ್ಕೆಯಾಗಿರುವ ಈ ಮೂವರು ಮಹಿಳೆಯರೂ ಬಂಟ್ವಾಳ(Bantwal) ತಾಲೂಕಿನವರು. ಬೆಂಗಳೂರಿಗೆ ರೈಲಿನಲ್ಲಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ಪಯಣಿಸುವ ಭಾಗ್ಯ ಇವರಿಗೆ ಒದಗಿ ಬಂದಿದ್ದು, ತಾಲೂಕಿನ ಅಳಿಕೆ ಅನುಗ್ರಹ ಒಕ್ಕೂಟದ ವಾರಿಜ ಮತ್ತು ಅಮಿತ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನೀ ಒಕ್ಕೂಟದ ಇಂದ್ರಾವತಿ ಎಂಬವರೇ ರಾಷ್ಟ್ರಪತಿಗಳ ಭೇಟಿಯ ಅವಕಾಶ ಪಡೆದವರು.

ರಾಷ್ಟ್ರಪತಿ(President of India)ಯವರು ಬುಡಕಟ್ಟು ಜನಾಂಗದ ಸ್ವ-ಸಹಾಯ ಗುಂಪಿನ ಸದಸ್ಯರನ್ನು ಭೇಟಿಯಾಗುವ ಸಲುವಾಗಿ ದೆಹಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತಿದ್ದು, ರಾಜ್ಯದಿಂದ 30 ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ.
