

ವಿಜಯನಗರ(ಮಾ.31): ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅಧಿಕೃತವಾಗಿ ಇಂದು(ಶುಕ್ರವಾರ) ರಾಜೀನಾಮೆ ಸಲ್ಲಿಸಿದ್ದಾರೆ. ಹೌದು, ಗೋಪಾಲಕೃಷ್ಣ ಅವರು ಸ್ಪೀಕರ್ ವಿಶ್ವೆಶ್ವರ ಹೆಗಡೆ ಕಾಗೇರಿ ಅವರನ್ನ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್ ತೆಕ್ಕೆಗೆ ಬಿದ್ದಂತಾಗಿದೆ.
ಗೋಪಾಲಕೃಷ್ಣ ಅವರು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. 70 ವರ್ಷ ದಾಟಿದವರಿಗೆ ಟಿಕೆಟ್ ಇಲ್ಲ ಎಂದಿರೋ ಪರಿಣಾಮ ಬಿಜೆಪಿ ವಿಕೆಟ್ ಪತನವಾಗಿದೆ.

