

ಬಂಟ್ವಾಳ : ಬಂಟ್ವಾಳ ಮಾಜಿ ಸಚಿವ ರಾದ ಬಿ. ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯ ದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ಬೃಹತ್ ಐಕ್ಯ ಸಮಾವೇಶ ನಾಳೆ ಸ್ಪರ್ಶ ಕಲಾ ಮಂದಿರ ದಲ್ಲಿ ನಡೆಯಲಿದೆ.ಕಾರ್ಯಕ್ರಮ ವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಉದ್ಘಾಟನೆ ನಡೆಸಲಿದ್ದು, ರಾಜ್ಯ ಸಭಾ ಸದಸ್ಯರಾದ ಎಲ್. ಹನುಮಂತಯ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಈ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಿ. ಸಿ. ರೋಡು ರಕ್ತೇಶ್ವರಿ ದೇವಸ್ಥಾನದಿಂದ ಸ್ಪರ್ಶಕಲಾ ಬೃಹತ್ ಪಾದಯಾತ್ರೆ ನಡೆಯಲಿದೆ.



