

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಕೆಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಕೆಎಸ್ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಮಾದರಿ ಟಿಕೆಟ್ ಹಂಚಿಕೆ ಮಾಡುವುದಾಗಿ ಸೂಚನೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲ ರಾಜಕೀಯ ನಾಯಕರಿಗೂ ಕೂಡ ಟಿಕೆಟ್ ನೀಡುವುದಿಲ್ಲ ಎಂಬ ಸುಳಿವನ್ನು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಗೆ ಈ ಬಾರಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಸಿಗುವುದಿಲ್ಲ ಎಂಬ ನಿರೀಕ್ಷೆಯಿಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಸ್ವತಃ ನಿವೃತ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ.
ರಾಜ್ಯ ರಾಜಕೀಯದಿಂದ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಹಿಂದೆ ಸರಿದಿದ್ದಾರೆ. ಈ ಸಂಬಂಧ ನಡ್ಡಾಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.




ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಒಟ್ಟಿನಲ್ಲಿ ಬಿಜೆಪಿ ಲಿಸ್ಟ್ ಬಿಡುಗಡೆ ಮುನ್ನವೇ ಈಶ್ವರಪ್ಪ ನಡೆ ಭಾರೀ ಕುತೂಹಲ ಮೂಡಿಸಿದೆ. ಇದಕ್ಕೂ ಮುನ್ನವೇ ಹಾಲಾಡಿ ಶ್ರೀನಿವಾಸ ಶೆಟ್ಟಿ, ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ರಾಜ್ಯ ರಾಜಕೀಯದಿಂದ ದೂರ ಸರಿದಿದ್ದು ಇದೀಗ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಿದ್ದಾರೆ