

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೃ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಆ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ನೀಡಲ್ಲ. ಬದಲಿಗೆ ಕೋಲಾರ ಟಿಕೆಟ್ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ ವರುಣಾದಿಂದ ಮಾತ್ರ ಸ್ಪರ್ಧೆ ಫಿಕ್ಸ್ ಆದಂತಾಗಿದೆ.



ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳಲ್ಲಿ ಟಿಕೆಟ್ ಬಾಕಿ ಇರಿಸಿಕೊಳ್ಳಲಾಗಿದೆ. ಅಖಂಡ ಶ್ರೀನಿವಾಸ್ ಮೂರ್ತಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಹರಿಹರದಲ್ಲಿ ರಾಮಪ್ಪ ಅವರಿಗೂ ಮೂರನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿಲ್ಲ. ಕೋಲಾರ ಕ್ಷೇತ್ರದಿಂದ ಭಾರೀ ನಿರೀಕಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್ ನೀಡಲಾಗಿದೆ.


ಕೋಲಾರದಿಂದ (Kolara Constituency) ಸಿದ್ಧರಾಮಯ್ಯಗೆ (Siddaramaiah) ಟಿಕೆಟ್ ನಿರಾಕರಿಸಲಾಗಿದ್ದು ವರುಣಾ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಮಾಡಲಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹಾರಿದ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ. ತೇರದಾಳ ಕ್ಷೇತ್ರದಿಂದ ಟಿಕೆಟ್ ನಿರೀಕ್ಷಿಸಿದ್ದ ನಟಿ ಉಮಾಶ್ರೀಗೆ ನಿರಾಸೆಯಾಗಿದ್ದು, ತೆರದಾಳದಿಂದ ಸಿದ್ಧಪ್ಪ ರಾಮಪ್ಪ ಕೊಣ್ಣೂರುಗೆ ಟಿಕೆಟ್ ಸಿಕ್ಕಿದೆ.
ಮದ್ದೂರಿನಲ್ಲಿ ಕೆ.ಎಂ ಉದಯ್ ಅವರಿಗೆ ನೀಡಲಾಗಿದೆ. ತರಿಕೇರೆಯಲ್ಲಿ ಜಿ.ಎಚ್ ಶ್ರೀನಿವಾಸ್‌ಗೆ ಟಿಕೆಟ್ ನೀಡಲಾಗಿದೆ. ಭಾರೀ ಬಂಡಾಯದ ನಡುವೆಯೂ ಮಾಜಿ ರಾಜ್ಯಪಾಲರಾದ ಮಾರ್ಗೆರೇಟ್ ಆಳ್ವಾ ಅವರ ಪುತ್ರ ನಿವೇದಿತಾ ಆಳ್ವಾಗೆ ಕುಮಟಾದಿಂದ ಟಿಕೆಟ್ ನೀಡಿದೆ. ಬೊಮ್ಮನಹಳ್ಳಿ ಕ್ಷೇತ್ರದಿಂದ ನಿರ್ಮಾಪಕ ಶ್ರೀನಿವಾಸ್ ಗೌಡಗೆ ಟಿಕೆಟ್ ನೀಡಲಾಗಿದೆ.
ದೇವರಹಿಪ್ಪರಗಿಯಲ್ಲಿ ಶರಣಪ್ಪ ಸುಣಗಾರ್‌ಗೆ, ಸಿಂಧನೂರಿನಲ್ಲಿ ಹಂಪನಗೌಡ ಬಾರ್ದಲಿ ಹಾಗೂ ಬಳ್ಳಾರಿಯಲ್ಲಿ ನಾರಾ ಭರತ್ ರೆಡ್ಡಿಗೆ ಟಿಕೆಟ್ ನೀಡಿದ್ದಾರೆ. ಆದ್ರೆ ಬಳ್ಳಾರಿಯಲ್ಲಿ ಬೆಂಬಲಿಗ ಆಂಜನೇಯಲುಗೆ ಟಿಕೆಟ್ ಕೊಡಿಸುವಲ್ಲಿ ಡಿ.ಕೆ ಶಿವಕುಮಾರ್ ವಿಫಲರಾಗಿದ್ದಾರೆ.

ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ 3ನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳನ್ನ ಬಾಕಿ ಇರಿಸಿಕೊಂಡಿದೆ.