

ಬಿಜೆಪಿಯಲ್ಲಿ ಸಿಎಂ ಸ್ಥಾನಕ್ಕೆ ಸಮರ್ಥರಾಗಿರುವ ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡ ಇದೆ. ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಅಡ್ಡಿಯಾಗಿರುವ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರ ರಾಜಕೀಯ ಭವಿಷ್ಯವನ್ನು ಮುಗಿಸುವ ಯತ್ನ ನಡೆದಿದೆ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಪ್ರಾಬಲ್ಯವನ್ನು ಕರ್ನಾಟಕದಲ್ಲಿ ಕುಗ್ಗಿಸಲು ಅಮುಲ್‌ಗೆ ಅವಕಾಶ ನೀಡುವುದಿಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದ ಹಾಲಿನ ಬ್ರಾಂಡ್ ನಂದಿನಿಯನ್ನು ಗುಜರಾತ್ ಮೂಲದ ಅಮೂಲ್ ಜೊತೆ ವಿಲೀನ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು.


