

ಕಾರು ಹಾಗೂ ತೂಫಾನ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಬಂದು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಕುಕ್ಕೆ ಕಡೆಗೆ ತೆರಳುತ್ತಿತ್ತು ಹಾಗೂ ತೂಫನ್ ವಾಹನ ಧರ್ಮಸ್ಥಳದೆಡೆಗೆ ತೆರಳುತ್ತಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

