

4ನೇ ಪಟ್ಟಿಯಲ್ಲೂ ಘೋಷಣೆಯಾಗದ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್ಗೆ ತಟ್ಟುವ ಸಾಧ್ಯತೆಯೂ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನಿರೀಕ್ಷೆಯಂತೆಯೇ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಲ್ಲಿ ಮೊಹಮ್ಮದ್ ಯೂಸುಫ್ ಸವಣೂರು ಅವರನ್ನು ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್?
ಕ್ಷೇತ್ರ – ಅಭ್ಯರ್ಥಿ
- ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ
- ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್
- ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ
- ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು
- ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ
- ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ
- ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ
4ನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ 2, ಒಕ್ಕಲಿಗ, ಭೋವಿ, ಕುರುಬ ಹಾಗೂ ಮುಸ್ಲಿಂ ಸಮುದಾಯದ ತಲಾ ಒಬ್ಬರು ಟಿಕೆಟ್ ಪಡೆದಿದ್ದಾರೆ

