

SDPI ರಾಷ್ಟ್ರೀಯ ನಾಯಕರಿಂದ ನಾಳೆಯಿಂದ ಎರಡು ದಿನ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಮಂಗಳೂರು ಎ 24: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಫೈಝಲ್ ಈಝ್ಝುದ್ದೀನ್ ರವರು ಮಂಗಳವಾರ ಮತ್ತು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ . ಈ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು, ಸಮಾಜದ ವಿವಿಧ ಮುಖಂಡರನ್ನು ಬೇಟಿಯಾಗಿ ಚರ್ಚೆ ನಡೆಸಲಿದ್ದಾರೆ . ಈ ಸಂದರ್ಭದಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಹಾಗೂ ಸ್ಥಳೀಯ ನಾಯಕರು ರಾಷ್ಟ್ರೀಯ ಮುಖಂಡರಿಗೆ ಸಾತ್ ನೀಡಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


