

ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದೆ. ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ಮಂಗಳೂರು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ಧಿಯ ಕುರಿತಾದ “ಅಭಿವೃದ್ಧಿ ಪಥ” ಪುಸ್ತಕ ಬಿಡುಗಡೆಗೊಳಿಸಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ತನ್ನ ಅವಧಿಯಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ನಗರಕ್ಕೆ ಅತೀ ಮುಖ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಜಲಸಿರಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, 70 – 80 ದಶಕದ ಹಳೆ ಪೈಪುಗಳನ್ನು ಬದಲಾಯಿಸಿ ಹೊಸ ಪೈಪುಗಳ ಜೋಡಣೆ ಮಾಡಲಾಗುತ್ತಿದ್ದು, ಅದಕ್ಕಾಗಿ 792 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಅಂದರು.
