

ನವದೆಹಲಿ/ಬೆಂಗಳೂರು: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಈ ಮೂಲಕ ರಾಜ್ಯ ಸರಕಾರಕ್ಕೆ ದೊಡ್ಡ ಶಾಕ್ ನೀಡಿದೆ.ರಾಜ್ಯದಲ್ಲಿ ಇತ್ತೀಚೆಗೆ ಇತರೆ (ಸಾಮಾಜಿಕ) ಹಿಂದುಳಿದ ವರ್ಗದ (ಒಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಹೊಂದಿದ್ದ ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆದುಹಾಕಿ ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿಗೆ ಸೇರ್ಪಡೆ ಮಾಡಿದ್ದ ಕರ್ನಾಟಕ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕರ್ನಾಟಕ ಸರ್ಕಾರದಿಂದ ರದ್ದುಗೊಳಿಸಲಾಗಿದ್ದ ಮುಸ್ಲಿಂ ಸಮುದಾಯದ ಒಬಿಸಿ ಮೀಸಲಾತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಕುರಿತು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯನ್ನು ಕೊಟ್ಟಿದೆ. ಜೊತೆಗೆ, ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ಸಮುದಾಯವು ಸಾಮಾಜಿಕ ಹಿಂದುಳಿದ ವರ್ಗದ (ಒಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಪಡೆದುಕೊಮಡಿತ್ತು. ಆದರೆ, ಇತ್ತೀಚೆಗೆ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮುಸ್ಲಿಮರಿಗೆ ನೀಡಲಾಗಿದ್ದ ಸಾಮಾಜಿಕ ಹಿಂದುಳಿದ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನು ಸಾಮಾನ್ಯ ವರ್ಗದ ಆರ್ಥಿಕ ಹಿಂದುಳಿದವರಿಗೆ ನೀಡಲಾಗುತ್ತಿದ್ದ ಶೇ.10 ಮೀಸಲಾತಿಗೆ ಸೇರ್ಪಡೆ ಮಾಡಲಾಗಿತ್ತು. ಇದರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮುಸ್ಲಿಂ ಸಮುದಾಯ ರಾಜ್ಯಾದ್ಯಂತ ಹೋರಾಟವನ್ನೂ ಮಾಡಿತ್ತು.
ನ್ಯೂಸ್ ಅಪ್ಡೇಟ್ ಆಗಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಸಿ

