
- ಸಿದ್ದರಾಮಯ್ಯ ಸಿಎಂ ಆಗೋಕೆ ಕ್ಷಣಗಣನೆ
- ಡಿಸಿಎಂ ಆಗಿ ಡಿ.ಕೆಶಿವಕುಮಾರ್ ಪದಗ್ರಹಣ
- ಕಂಠೀರವ ಸ್ಟೇಡಿಯಂನಲ್ಲಿ ಜೋಡೆತ್ತು ಪ್ರಮಾಣ ವಚನಕ್ಕೆ ವೇದಿಕೆ ಸಜ್ಜು
ಬೆಂಗಳೂರು : ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು ಹೇಳಿ ಅಧಿಕೃತವಾಗಿ ಸಿದ್ದರಾಮಯ್ಯ ಸಿಎಂ ಆಗೋಕೆ ಕ್ಷಣಗಣನೆ ಶುರುವಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಜೋಡೆತ್ತು ಪ್ರಮಾಣ ವಚನಕ್ಕೆ ವೇದಿಕೆ ಸಜ್ಜಾಗಿದೆ. ನಾಳೆ ನಡೆಯಲಿರುವ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಬಂದೋಬಸ್ತ್ ಮತ್ತು ಟ್ರಾಫಿಕ್ ಕಂಟ್ರೋಲ್ ಗೆ ಬಿಗ್ ಪ್ಲಾನ್ ಮಾಡಿಕೊಂಡಿದೆ.
ನಿಯೋಜಿತ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಡಿಸಿಎಂ ಆಗಿ ಡಿ.ಕೆಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ಆರಂಭವಾಗುವ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ.


