
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (Dg IGP) ಅಲೋಕ್ ಮೋಹನ್ (Alok Mohan) ಅವರು ನೇಮಕಗೊಂಡಿದ್ದಾರೆ.
ಡಿಜಿಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.

ಕರ್ನಾಟಕ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


