
ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಝೀರೋ ಟ್ರಾಫಿಕ್ (Zero Traffic) ನಿರಾಕಿರಿಸಿದ ಸಿಎಂ (Siddaramaiah) ಅವರು ಇದೀಗ, ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ. ನೀಡುವುದಾದರೆ ಪುಸ್ತಕ ನೀಡಿ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ನೆಟ್ಟಿಗರು ಸ್ವಾಗತಿಸಿದ್ದಾರೆ
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

ಬಿಜೆಪಿ ಸರ್ಕಾರ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್ ಅವರು ಕೂಡ ಗೌರವ-ಸನ್ಮಾನದ ರೂಪದಲ್ಲಿ ನೀಡುವ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಿರಾಕರಿಸಿದ್ದರು. ಅಭಿನಂದಿಸಲು ಹಾರ ತುರಾಯಿ ತರಬೇಡಿ, ಕೊಡಲೇಬೇಕು ಅಂದಿದ್ದರೆ ಕನ್ನಡ ಪುಸ್ತಕ ಕೊಂಡು ತನ್ನಿ, ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ, ಇಂತಹ ಉತ್ತಮವಾದ ನಡೆಯನ್ನು ದೇಶದ ವಿವಿಧ ರಾಜ್ಯಗಳ ರಾಜಕಾರಣಿಗಳೂ ಅನುಸರಿಸುತ್ತಿದ್ದಾರೆ.

