
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಪುತ್ತೂರು ಸೇರಿ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿ ನಡೆದಿದೆ.
ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್‌ಐ (PFI) ಹವಾಲ ಹಣದ ಜಾಲವನ್ನು ಎನ್‌ಐಎ ಭೇದಿಸುತ್ತಿದೆ. ಅಲ್ಲದೇ ಭಾರತದಲ್ಲಿ ಫಂಡಿಂಗ್ ಮಾಡುತ್ತಿದ್ದ ನೆಟ್ವರ್ಕ್ ಪತ್ತೆಯಾಗಿದೆ. ಈ ಬಗ್ಗೆ ಪತ್ತೆಹಚ್ಚುವ ಸಲುವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ ನಡೆಸಲಾಗಿದೆ.ಎಂದು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

