
ಕಾಂಗ್ರೆಸ್ ಸುಳ್ಳುಗಾರರ, ಮೋಸಗಾರರ ಪಾರ್ಟಿ. ಪ್ರಧಾನಿ ಮೋದಿ ಎಲ್ಲೂ 15 ಲಕ್ಷ ರೂಪಾಯಿ ಕೊಡುವ ಗ್ಯಾರಂಟಿ ಕಾರ್ಡ್ ಕೊಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಲ್ಟಾ ಹೊಡೆದಿದ್ದಾರೆ. ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಚುನಾವಣೆ ವೇಳೆ ಕಾಂಗ್ರೆಸ್ನವರು ಗ್ಯಾರಂಟಿ ಘೋಷನೆ ಮಾಡಿದ್ದರು. ಅಧಿಕಾರಕ್ಕೆ ಬಂದು 20 ದಿನಗಳಾದರೂ ಗ್ಯಾರಂಟಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿ ಮಾಡಿದೆ, ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.
ಜನ ಕರೆಂಟ್ ಬಿಲ್ ಕಟ್ಟುತ್ತಿಲ್ಲ, ಬಸ್ಗಳಲ್ಲಿ ಟಿಕೆಟ್ ಪಡೆಯುತ್ತಿಲ್ಲ. ಅಡ್ಡ ದಾರಿಯಲ್ಲಿ ಕಾಂಗ್ರೆಸ್ ಅಧಿಕಾರ ಬಂದಿದೆ. ಕಪ್ಪು ಹಣ ತಂದರೆ 15 ಲಕ್ಷ ರೂ. ಕೊಡ್ತೇವೆ ಅಂತಷ್ಟೇ ಪ್ರಧಾನಿ ಮೋದಿ ಹೇಳಿದ್ದಾರೆ. ಮೋದಿ ಎಲ್ಲೂ 15 ಲಕ್ಷ ರೂ. ಕೊಡುವ ಗ್ಯಾರಂಟಿ ಕಾರ್ಡ್ ಕೊಟ್ಟಿಲ್ಲ. ಗ್ಯಾರಂಟಿ ಜಾರಿ ಮಾಡದಿದ್ರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.


