
ಟಿಪ್ಪು ಸುಲ್ತಾನ್ (Tipu Sultan) ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರ ದ (Maharashtra) ಕೊಲ್ಹಾಪುರದಲ್ಲಿ (Kolhapur) ಉದ್ವಿಗ್ನತೆ ಉಂಟಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ಆಕ್ಷೇಪಾರ್ಹ ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ್ದವು. ಲೈವ್ ಹಿಂದೂಸ್ತಾನ್‌ನ ವರದಿಯ ಪ್ರಕಾರ ಸ್ಥಳೀಯರು ಮೊಘಲ್ ಚಕ್ರವರ್ತಿ ಔರಂಗಜೇಬ್ ಅನ್ನು ಬೆಂಬಲಿಸುವ ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಬಗ್ಗೆ ಕೆಲವು ಬಲಪಂಥೀಯ ಕಾರ್ಯಕರ್ತರು ಈ ಬಗ್ಗೆ ಪ್ರತಿಭಟನೆ ನಡೆಸಲು ಶಿವಾಜಿ ಚೌಕ್‌ನಲ್ಲಿ ಜಮಾಯಿಸಿದ್ದರು. ಪೊಲೀಸರ ಪ್ರಕಾರ, ಪ್ರತಿಭಟನೆ ಮುಗಿದ ನಂತರ ಗುಂಪು ಚದುರಿತು. ಆದರೆ, ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐ ಹಂಚಿಕೊಂಡ ವೀಡಿಯೊದಲ್ಲಿ, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್ ಚಿತ್ರವನ್ನು ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಉಸ್ತುವಾರಿ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ.
ಹೆಚ್ಚುವರಿ ಪಡೆ ನಿಯೋಜನೆ ಮಾಡಲಾಗಿದೆ. ಈವರೆಗೆ 21 ಮಂದಿಯನ್ನು ಬಂಧಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಂಡಿತ್ ಎಎನ್‌ಐಗೆ ತಿಳಿಸಿದ್ದಾರೆ.

ಜನರು ಶಾಂತವಾಗಿರುವಂತೆ ಮನವಿ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಒತ್ತಾಯಿಸಿದರು. ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡಲಾಗುವುದಿಲ್ಲ. ನಾನು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಸಾಮಾನ್ಯ ಜನರ ಕಲ್ಯಾಣವು ನಮ್ಮ ಮೊದಲ ಆದ್ಯತೆಯಾಗಿದೆ. ಜನರು ಸಹಕರಿಸಬೇಕು ಎಂದು ಶಿಂಧೆ ಒತ್ತಾಯಿಸಿದ್ದಾರೆ.
ರಾಜ್ಯವನ್ನು ಆಳುವವರು ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸುವ ಜವಾಬ್ದಾರರು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಹೇಳಿಕೆ ನೀಡಿದ್ದಾರೆ
