Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ರಾಜ್ಯದ ಡ್ಯಾಂಗಳು ಖಾಲಿ: 10 ಜಲಾಶಯಗಳಲ್ಲಿ ನೀರು ಬರಿದು!

editor tv by editor tv
June 9, 2023
in ರಾಜ್ಯ
0
ರಾಜ್ಯದ ಡ್ಯಾಂಗಳು ಖಾಲಿ: 10 ಜಲಾಶಯಗಳಲ್ಲಿ ನೀರು ಬರಿದು!
1.9k
VIEWS
Share on FacebookShare on TwitterShare on Whatsapp

ಮುಂಗಾರು ಮಳೆ ವಿಳಂಬದಿಂದಾಗಿ ರಾಜ್ಯದ 10 ಅಣೆಕಟ್ಟುಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ ಆರಂಭವಾಗುವ ಆತಂಕ ಉಂಟಾಗಿದೆ

ಬೆಂಗಳೂರು (ಜೂ.09): ಮುಂಗಾರು ಮಳೆ ವಿಳಂಬದಿಂದಾಗಿ ರಾಜ್ಯದ 10 ಅಣೆಕಟ್ಟುಗಳು ಬರಿದಾಗಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಜತೆಗೆ ಜಲಸಂಘರ್ಷ ಆರಂಭವಾಗುವ ಆತಂಕ ಉಂಟಾಗಿದೆ. ತುಂಗಭದ್ರಾ, ಲಿಂಗನಮಕ್ಕಿ ಜಲಾಶಯಗಳ ಮಟ್ಟ10 ವರ್ಷದ ಕನಿಷ್ಠಕ್ಕೆ ಕುಸಿದಿದ್ದರೆ, ಆಲಮಟ್ಟಿ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ 7 ವರ್ಷ ಹಾಗೂ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌)ದಲ್ಲಿನ ನೀರಿನ ಮಟ್ಟ 5 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಕಬಿನಿ, ಹಾರಂಗಿ, ಬಸವಸಾಗರ, ಘಟಪ್ರಭಾ, ಮಲಪ್ರಭಾ, ವಾಣಿವಿಲಾಸ ಸಾಗರಗಳಲ್ಲಿಯೂ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿಯ ನೀರಿನ ಮಟ್ಟದಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡು ಬಂದಿದೆ. ಕೆಆರ್‌ಎಸ್‌ನಲ್ಲಿ ಕೇವಲ 3 ಟಿಎಂಸಿಯಷ್ಟುಮಾತ್ರ ನೀರು ಬಳಕೆಗೆ ಲಭ್ಯವಿದೆ. ಇದರ ಜತೆಗೆ ಜೂನ್‌ ಕೋಟಾದಡಿ ತಮಿಳುನಾಡಿಗೆ 21 ಟಿಎಂಸಿ ನೀರು ಹರಿಸಬೇಕಿದೆ. ಮಳೆ ಮತ್ತಷ್ಟುವಿಳಂಬವಾದರೆ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜನರಿಗೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವುದರ ಜತೆಗೆ ತಮಿಳುನಾಡಿನ ಜತೆ ಜಲಸಂಘರ್ಷವೂ ಸೃಷ್ಟಿಯಾಗುವ ಭೀತಿ ವ್ಯಕ್ತವಾಗುತ್ತಿದೆ.

ಬರಿದಾದ ತುಂಗಭದ್ರೆ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ ಕೇವಲ 5 ಟಿಎಂಸಿ (ಗರಿಷ್ಠ 105 ಟಿಎಂಸಿ) ನೀರಿದ್ದು, ಕಳೆದ 10 ವರ್ಷಗಳ ಅವಧಿಯಲ್ಲಿಯೇ ಅತಿ ಕನಿಷ್ಠ ಮಟ್ಟಇದಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳ ಜನರಿಗೆ ಕುಡಿಯುವ ನೀರಿನ ಕೊರತೆ ಎದುರಾಗುವ ಆತಂಕವಿದೆ. ಕಳೆದ ಬಾರಿ ಇದೇ ವೇಳೆಗೆ ಡ್ಯಾಂನಲ್ಲಿ 30 ಟಿಎಂಸಿಯಷ್ಟುನೀರಿತ್ತು. ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ1748 (ಗರಿಷ್ಠ 1818) ಅಡಿಗಳಿಗೆ ಕುಸಿದಿದೆ. 

151 ಟಿಎಂಸಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ 16 ಟಿಎಂಸಿಯಷ್ಟುನೀರಿನ ಸಂಗ್ರಹವಿದೆ. ಇದು 10 ವರ್ಷಗಳಲ್ಲೇ ಕನಿಷ್ಠವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1756 ಅಡಿಗಳಷ್ಟುನೀರಿತ್ತು. 24 ಟಿಎಂಸಿ ಸಂಗ್ರಹವಾಗಿತ್ತು. ಆಲಮಟ್ಟಿಜಲಾಶಯದ ನೀರಿನ ಮಟ್ಟ507 (ಗರಿಷ್ಠ 519) ಮೀಟರ್‌ಗಳಿಗೆ ಇಳಿದಿದ್ದು, ಇದು ಕಳೆದ 7 ವರ್ಷಗಳಲ್ಲಿಯೇ ಅತಿ ಕನಿಷ್ಠ ಮಟ್ಟವಾಗಿದೆ. 123 ಟಿಎಂಸಿ ನೀರು ಸಾಮರ್ಥ್ಯದ ಜಲಾಶಯದಲ್ಲಿ 3 ಟಿಎಂಸಿಗಳಷ್ಟುನೀರಿನ ಸಂಗ್ರಹವಿದೆ. ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ81 (ಗರಿಷ್ಠ 124) ಅಡಿಗಳಿಗೆ ಕುಸಿದಿದ್ದು, ಇದು ಕಳೆದ 5 ವರ್ಷಗಳಲ್ಲಿಯೇ ಅತಿ ಕನಿಷ್ಠ ಮಟ್ಟವಾಗಿದೆ.

49 ಟಿಎಂಸಿ ಸಾಮರ್ಥ್ಯದ ಅಣೆಕಟ್ಟೆಯಲ್ಲಿ 11 ಟಿಎಂಸಿ ನೀರಿದ್ದು, ಆ ಪೈಕಿ 3 ಟಿಎಂಸಿಯಷ್ಟುನೀರು ಮಾತ್ರ ಬಳಕೆಗೆ ಸಿಗಲಿದೆ. ಕೃಷ್ಣಾ ಹಾಗೂ ಭೀಮಾ ನದಿಗಳಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯದಲ್ಲಿನ ನೀರಿನ ಮಟ್ಟದಲ್ಲಿ ಇಳಿಕೆಯಾಗಿದ್ದು, ಪ್ರಸ್ತುತ 15 ಟಿಎಂಸಿಯಷ್ಟುಮಾತ್ರ ನೀರಿನ ಸಂಗ್ರಹವಿದೆ. 

ಹಾರಂಗಿಯಲ್ಲೂ ಕುಸಿತ: ಕೊಡಗಿನ ಹಾರಂಗಿಯಲ್ಲಿಯೂ ನೀರಿನ ಮಟ್ಟ2819 (ಗರಿಷ್ಠ 2859) ಅಡಿಗಳಿಗೆ ಕುಸಿದಿದೆ. 6 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 5 ಟಿಎಂಸಿಯಷ್ಟುನೀರಿದೆ. ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ124 (ಗರಿಷ್ಠ 130) ಅಡಿಗಳಿಗೆ ಕುಸಿದಿದೆ. 30 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 19 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಈ ಮಧ್ಯೆ, 2284 ಅಡಿ ಗರಿಷ್ಠ ಮಟ್ಟದ ಕಬಿನಿ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ2250 ಅಡಿಗಳಿಗೆ ಕುಸಿದಿದೆ. 19 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 4 ಟಿಎಂಸಿಯಷ್ಟುನೀರಿದೆ. ಬೆಳಗಾವಿ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಮಲಪ್ರಭಾ ಮತ್ತು ಘಟಪ್ರಭಾ ಜಲಾಶಯಗಳಲ್ಲೂ ನೀರಿನ ಸಂಗ್ರಹ ಕುಸಿದಿದೆ. ಮಲಪ್ರಭಾ ಜಲಾಶಯದ ನೀರಿನ ಮಟ್ಟ2046 (ಗರಿಷ್ಠ 2079) ಅಡಿಗಳಿಗೆ ಕುಸಿದಿದ್ದರೆ, ಘಟಪ್ರಭಾ ಜಲಾಶಯದ ನೀರಿನ ಮಟ್ಟ2064 (ಗರಿಷ್ಠ 2175) ಅಡಿಗಳಿಗೆ ಇಳಿದಿದೆ.

ಸುಪಾದಲ್ಲಿ ಕಳೆದ ಬಾರಿಗಿಂತ ಅಧಿಕ: ಆದರೆ, ಉತ್ತರ ಕನ್ನಡ ಜಿಲ್ಲೆಯ ಸುಪಾ ಜಲಾಶಯದಲ್ಲಿ ನೀರಿನ ಮಟ್ಟಕಳೆದ ಬಾರಿಗಿಂತ ಹೆಚ್ಚಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ519 (ಗರಿಷ್ಠ 564 ಮೀ.) ಮೀಟರ್‌ಗಳಷ್ಟಿತ್ತು. ಈ ಬಾರಿ ನೀರಿನ ಮಟ್ಟ529 ಮೀಟರ್‌ಗಳಷ್ಟಿದೆ. 40 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 27 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ.

ಎಲ್ಲಿ, ಎಷ್ಟು ನೀರು?
ಡ್ಯಾಂ ಗರಿಷ್ಠ 2023 2022
ತುಂಗಭದ್ರಾ 105 5 30
ಲಿಂಗನಮಕ್ಕಿ 151 16 24
ಆಲಮಟ್ಟಿ 123
ಬಸವಸಾಗರ
ಕೆಆರ್‌ಎಸ್‌ 49 11 27

Previous Post

ಮೊಬೈಲ್‌ನಲ್ಲಿ ಗೇಮ್‌ ಆಡಿದ 13 ವರ್ಷದ ಬಾಲಕಿ, ಖಾತೆಯಲ್ಲಿದ್ದ 52 ಲಕ್ಷದಲ್ಲಿ ಉಳಿದದ್ದು 5 ರೂಪಾಯಿ ಮಾತ್ರ!

Next Post

ಜ್ಞಾನವಾಪಿ ಮಸೀದಿ ಪ್ರಕರಣ: ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಮುಖ್ಯ ದಾವೆದಾರರಾದ ರಾಖಿ ಸಿಂಗ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.