
ಹೊಸದಿಲ್ಲಿ: ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ಗುರುವಾರ ಸಂವಾದದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಏಪ್ರಿಲ್ ನಲ್ಲಿ ಸುಡಾನ್ ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸೌದಿ ಅರೇಬಿಯಾದ ‘ಅತ್ಯುತ್ತಮ ಬೆಂಬಲ’ ಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರು ಮುಂಬರುವ ಹಜ್ ಯಾತ್ರೆಗೆ ಶುಭ ಹಾರೈಸಿದರು. ದ್ವಿಪಕ್ಷೀಯ ಸಹಕಾರ ವಿಷಯಗಳ ಕುರಿತು ನಾಯಕರು ದೂರವಾಣಿಯಲ್ಲಿ ಮಾತನಾಡಿದ್ದಾರೆ. ಹಲವಾರು ಜಾಗತಿಕ ಮತ್ತು ಬಹುಪಕ್ಷೀಯ ವಿಷಯಗಳ ಕುರಿತು ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ವರದಿ ಮಾಡಿದೆ.

ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಸ್ತುತ G20 ಪ್ರೆಸಿಡೆನ್ಸಿಯ ಸಮಯದಲ್ಲಿ ಭಾರತದ ಚಟುವಟಿಕೆಗಳಿಗೆ ಸಂಪೂರ್ಣ ಬೆಂಬಲವನ್ನು ನೀಡಿದರು. ಅಲ್ಲದೆ ಭಾರತಕ್ಕೆ ಅವರ ಭೇಟಿಗೆ ಉತ್ಸುಕತೆಯನ್ನು ವ್ಯಕ್ತಪಡಿಸಿದರು. ಇಬ್ಬರೂ ನಾಯಕರು ನಿರಂತರ ಮಾತುಕತೆಯ ಅಗತ್ಯವನ್ನು ಒಪ್ಪಿಕೊಂಡರು.