
ಗುರುಪುರ, ಜೂ 22 (HAYATH TV NEWS): ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗುರುಪುರದಲ್ಲಿ ಜೂ 22ರ ಗುರುವಾರ ನಡೆದಿದೆ.
ಮೃತ ಬೈಕ್ ಸವಾರನನ್ನು ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಮಗ ಸಂತೋಷ್ (38) ಎಂದು ಗುರುತಿಸಲಾಗಿದೆ.

ಸಂತೋಷ್ ಅವರು ವಾಮಂಜೂರಿನ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ತಮ್ಮ ಮನೆಯಿಂದ ಕೆಲಸಕ್ಕೆ ಎಂದಿನಂತೆ ತೆರಳುತ್ತಿದ್ದ ವೇಳೆ ಗುರುಪುರದ ಬ್ಯಾಂಕ್ ಬಳಿ ಘಟನೆ ನಡೆದಿದೆ.
ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ.


