
ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನಾಳೆ (ಜುಲೈ 9 ,ಭಾನುವಾರ) ಉಳ್ಳಾಲ ತಾಲೂಕಿನ ದೇರಳಕಟ್ಟೆಗೆ ಆಗಮಿಸಲಿದ್ದಾರೆ. ಸಾಯಂಕಾಲ ನಾಲ್ಕು ಗಂಟೆಗೆ ದೇರಳಕಟ್ಟೆಯ ಬಿಸಿಸಿ ಅಡಿಟೋರಿಯಂ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯುವ ಪಕ್ಷದ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಅಬ್ದುಲ್ ಮಜೀದ್ ರವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ , ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಉಳ್ಳಾಲ ಹಾಗೂ ಇತರ ಮುಖಂಡರು ಪಾಲ್ಗೊಳ್ಳಲಿದ್ದಾರೆ , ಈ ಸಮಾವೇಶಕ್ಕೆ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

