Hayath Tv Digital Desk | Edited By: Ashraf Kammaje
Updated on:Jul 19, 2023 | 5:50 PM

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ನೀಡಿದ್ದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಶಾಸಕರು ನೋಟಿಸ್ಗೆ ಸಹಿ ಹಾಕಿದ್ದಾರೆ.
ಬೆಂಗಳೂರು: ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಿನ್ನೆ ಪ್ರತಿಪಕ್ಷಗಳ ಸಭೆ ವೇಳೆ ವಿಧಾನಸಭೆ ಸ್ವೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ಗೆ ಸಹಿ ಹಾಕಿದ್ದಾರೆ ಎಂದು news9 ವರದಿ ಮಾಡಿದೆ.

ಸ್ವೀಕರ್ ಸ್ಥಾನ ಸಾಂವಿಧಾನಿಕವಾಗಿದ್ದು, ಇತರೆ ಯಾವುದೇ ಪಕ್ಷಗಳೊಂದಿಗೆ ಗುರುತಿಸಕೊಳ್ಳುವಂತಿಲ್ಲ. ಆದರೆ ವಿಧಾನಸಭೆಯ ಎಲ್ಲಾ ಸದಸ್ಯರಿಂದ ಆಯ್ಕೆಯಾದ ಸ್ಪೀಕರ್ ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ಪದಚ್ಯುತಗೊಳಿಸಬೇಕು ಮತ್ತು 169 ರ ಅಡಿಯಲ್ಲಿ ಸದನದಲ್ಲಿ ನಿರ್ಣಯವನ್ನು ತರಲು ಸಮಯ ನೀಡುವಂತೆ ನಾವು ವಿನಂತಿಸುತ್ತೇವೆ ಎಂದು ವಿಧಾನಸಭೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಯು.ಟಿ ಖಾದರ್ ಅವರು ಈ ವರ್ಷ ಮೇ 24 ರಂದು ಸ್ಪೀಕರ್ ಆಗಿ ಸರ್ವಾನುಮತದಿಂದ ಆಯ್ಕೆಯಾದರು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಧಿವೇಶನ ಮುಂದುವರಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಖಾದರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆತ: 10 ಬಿಜೆಪಿ ಶಾಸಕರು ಅಮಾನತು
ವಿಧಾನಸಭೆ ಕಲಾಪದ ಮೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮೇಲೆ ಕಾಗದ ಪತ್ರ ಹರಿದು ಎಸೆಯಲಾಗಿದೆ. ಈ ಹಿನ್ನೆಲೆ ಸ್ಪೀಕರ್ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದು, 10 ಬಿಜೆಪಿ ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.