
ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ನಡೆದಿದೆ. ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ (20 ತಿಂಗಳು) ಎಂದು ತಿಳಿದು ಬಂದಿದೆ. ಮನೆಯಲ್ಲಿ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಆಟವಾಡುತ್ತಿದ್ದ ಮಗು ಬಕೆಟ್ ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕಾವೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

