
ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ – ಮತ್ತೆ ಮಣಿಪುರ ಉದ್ವಿಗ್ನ
ಮಣಿಪುರ, ಜು 20: ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.
ಮೇ 4 ರಂದು ಈ ಘಟನೆ ನಡೆದಿದ್ದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಗುಂಪಿನ ಮೆರವಣಿಗೆಯ ಒಂದು ದಿನದ ಮುಂಚಿತವಾಗಿ ಈ ವಿಡಿಯೋ ಬಿಡುಗಡೆ ಮಾಡಲಾಗಿದೆ.

ವಿಡಿಯೋದಲ್ಲಿ ದುಷ್ಕರ್ಮಿಗಳ ಗುಂಪು ಅವರನ್ನು ಹಿಂಸಿಸುತ್ತಿರುವುದು ಮತ್ತು ಮಹಿಳೆಯರು ನಿರಂತರ ಸಹಾಯಕ್ಕಾಗಿ ಅಂಗಲಾಚುವುದು ದಾಖಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಐಟಿಎಲ್‌ಎಫ್ ಮನವಿ ಮಾಡಿದೆ. ಘಟನೆಯನ್ನು ದೃಢಿಕರಿಸಿರುವ ಪೊಲೀಸರು ಬುಧವಾರ ಸಂಜೆ ಹೇಳಿಕೆ ಬಿಡುಗಡೆ ಮಾಡಿದ್ದು, ದುಷ್ಕರ್ಮಿಗಳ ಬಂಧನಕ್ಕಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿರುವುದಾಗಿ ಹೇಳಿದೆ.

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ (Manipur Women Parade) ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನ ಮರಣದಂಡನೆ ಶಿಕ್ಷೆಗೂ ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ (Biren Singh) ಹೇಳಿದ್ದಾರೆ.

ಪ್ರಸ್ತುತ ಸಂಪೂರ್ಣ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗೆ ಮರಣದಂಡನೆಯ ಸಾಧ್ಯತೆಯನ್ನು ಸೇರಿದಂತೆ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನ ನಾವು ಖಚಿತಪಡಿಸುತ್ತೇವೆ. ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿಕೆ, ಸುಪ್ರೀಂ ಕೋರ್ಟ್ ಸ್ವಯಂದೂರಿನ ಬಳಿಕ ಘಟನೆಗೆ ಸಂಬಂಧಿಸುದಂತೆ ಸ್ವಯಂ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಡಿಜಿಪಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದೆ.