| Edited By: Ashraf Kammaje
Updated on:Jul 27, 2023 | 11:43 AM
ಕರಾವಳಿ ಭಾಗದಲ್ಲಿ ನಿಂತರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಆಗುಂಬೆ ಘಾಟ್ನಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಉಡುಪಿ, (ಜುಲೈ 27): ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ವಾರದಿಂದ ನಿರಂತರವಾಗಿ ಭಾರಿ ಮಳೆ ಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ಆಗುಂಬೆ ಘಾಟ್ನಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಇಂದಿನಿಂದ ಅದರೆ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಆಗುಂಬೆ ಘಾಟ್ನ 6ನೇ ತಿರುವಿನ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ 6ನೇ ತಿರುವಿನಲ್ಲಿ ರಸ್ತೆಯ ಪಕ್ಕದಲ್ಲಿಯೇ ಮಣ್ಣು ಕುಸಿದಿದ್ದು, ಭಾರಿ ವಾಹನ ಸಂಚಾರದಿಂದ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಮಾರ್ಗದಲ್ಲಿ ಬಸ್, ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗ ಬಳಸುವಂತೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ.

ಬಸ್, ಲಾರಿ ಸೇರಿದಂತೆ ಭಾರಿ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದೆ. ತೀರ್ಥಹಳ್ಳಿ-ಆಗುಂಬೆ-ಮಾಳಾಘಾಟ್-ಕಾರ್ಕಳ-ಉಡುಪಿ ಅಥವಾ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ-ಉಡುಪಿ ಮಾರ್ಗ ಬಳಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರ ಮಾಹಿತಿ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸ್ಪಷ್ಟಪಡಿಸಿದರು
