
ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಡಿ.ವೈ.ಎಸ್. ಪಿ.ಕಚೇರಿಯ ಸಿಬ್ಬಂದಿ ಪ್ರಸ್ತುತ ಎನ್. ಐ.ಎ.ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಎಂಬ ಪೊಲೀಸ್ ಸಿಬ್ಬಂದಿಯ ಕುಟುಂಬದ ಮೇಲೆ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


