
ರಾಜ್ಯದಲ್ಲಿ ಮಾದಕ ವಸ್ತು ಮಾರಾಟ ಹೆಚ್ಚುತ್ತಿರುವ ಹಿನ್ನಲೆ ಇದನ್ನು ತಡೆಗಟ್ಟುವ ಸಲುವಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಇದೀಗ ಮಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರು, ಆ.01: ರಾಜ್ಯದಲ್ಲಿ ಮಾದಕ ವಸ್ತು ಮಾರಾಟ ಹೆಚ್ಚುತ್ತಿರುವ ಹಿನ್ನಲೆ ಇದನ್ನು ತಡೆಗಟ್ಟುವ ಸಲುವಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಆದರೂ ಕೂಡ ಅಲ್ಲಲ್ಲಿ ಇಂತಹ ಘಟನೆಗಳು ಬೆಳಕಿಗೆ ಬರುತ್ತಿವೆ. ಹೌದು, ಇತ್ತೀಚೆಗೆ ಮಂಗಳೂರಿ(Mangalore)ನಲ್ಲಿ ಸಿಸಿಬಿ ಪೊಲೀಸರು, ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ಮಾಧಕ ವನ್ನು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಲಾಗಿತ್ತು. ಅದರಂತೆ ಇದೀಗ ನಗರದ ನಿವಾಸಿಗಳಾದ ಗಣೇಶ್, ಅಭಿಲಾಷ್, ರಾಹುಲ್ ಎಂಬುವವರು ಮಂಗಳೂರಿನ ಬೋಳಾರು ಬಳಿ ಆಟೋದಲ್ಲಿ ಕುಳಿತುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

