
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸುವುದು, ದಬ್ಬಾಳಿಕೆ,ದೌರ್ಜನ್ಯ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ. ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಅವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆಸೂಚನೆ ನೀಡಿದ್ದೇನೆ ಎಂದರು.
ಜಿಲ್ಲೆಗೆ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ರು.

