Ashraf Kammaje|
Updated on: Aug 05, 2023 | 10:21 AM

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ
ಇಂಫಾಲ್, ಆ.5: ಮಣಿಪುರ ದಲ್ಲಿ (Manipur) ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.
