
ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು.
ಕುಂದಾಪುರ (ಆ.05): ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ಸಂಜೆ ಬ್ರಹ್ಮಾವರ ಸಮೀಪದ ಅಮ್ಮುಂಜೆಯ ತಮ್ಮ ಮನೆಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ನಾನೇ ಅಭ್ಯರ್ಥಿ ಎಂಬ ಸ್ಪಷ್ಟತೆ ಇಲ್ಲ. ಪಕ್ಷದಿಂದ ಟಿಕೆಟ್ ನೀಡಿದಲ್ಲಿ ಎಲ್ಲರ ಆಶೀರ್ವಾದ ಪಡೆದು ಮತದಾರರ ಸಹಕಾರ ಕೋರಿ ಸ್ಪರ್ಧೆಗೆ ಇಳಿಯಲು ಸಿದ್ಧನಿದ್ದೇನೆ. ಟಿಕೆಟ್ ನೀಡದೇ ಇದ್ದರೆ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
