Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರ್‌ಪಿಎಫ್ ಕಾನ್ಸ್‌ಟೇಬಲ್‌ ವಿರುದ್ಧ ಮತೀಯ ದ್ವೇಷ ಹರಡಿದ ಆರೋಪ

editor tv by editor tv
August 7, 2023
in ರಾಷ್ಟ್ರೀಯ
0
ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರ್‌ಪಿಎಫ್ ಕಾನ್ಸ್‌ಟೇಬಲ್‌ ವಿರುದ್ಧ ಮತೀಯ ದ್ವೇಷ ಹರಡಿದ ಆರೋಪ
1.9k
VIEWS
Share on FacebookShare on TwitterShare on Whatsapp

Ashraf Kammaje |

Updated on:Aug 07, 2023 | 7:33 PM

ಆರೋಪಿಯ ಬಂಧನದ ವೇಳೆ ಪೊಲೀಸರು ಇಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ನ್ಯಾಯಾಲಯ ಆರೋಪಿಗೆ ಆಗಸ್ಟ್ 11ರವರೆಗೆ ಪೊಲೀಸ್ ಕಸ್ಟಡಿ ನೀಡಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ), ಶಸ್ತ್ರಾಸ್ತ್ರ ಕಾಯಿದೆ 3, 25, 27 ಮತ್ತು ರೈಲ್ವೇಸ್ ಆಕ್ಟ್ ಕೂಡ ಸೇರಿದೆ.

ದೆಹಲಿ ಆಗಸ್ಟ್ 07: ಜೈಪುರ-ಮುಂಬೈ ರೈಲಿನಲ್ಲಿ (Jaipur-Mumbai train) ನಾಲ್ಕು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ ರೈಲ್ವೇ ಸಂರಕ್ಷಣಾ ಪಡೆ (Railway Protection Force -RPF) ಕಾನ್ಸ್‌ಟೇಬಲ್‌ ಕೃತ್ಯದಲ್ಲಿ ಯಾವುದೇ ಕೋಮು ದ್ವೇಷ ಇಲ್ಲ ಎಂದು ಹೇಳಿದ್ದ ರೈಲ್ವೇ ಪೊಲೀಸರು ಇದೀಗ ಧರ್ಮದ ಆಧಾರದಲ್ಲಿ ವಿವಿಧ ವರ್ಗದ ಜನರ ನಡುವೆ ದ್ವೇಷ ಹರಡಿರುವ ಬಗ್ಗೆ ಸೆಕ್ಷನ್‌ 153ಎ ಅಡಿಯಲ್ಲಿ ಆರೋಪವನ್ನು ಎಫ್‌ಐಆರ್‌ನಲ್ಲಿ ಸೇರಿಸಿದ್ದಾರೆ. ಸರ್ಕಾರಿ ರೈಲ್ವೇ ಪೊಲೀಸರು (GRP), ಆರೋಪಿ RPF ಕಾನ್‌ಸ್ಟೆಬಲ್ ಚೇತನ್ ಸಿಂಗ್ (Chetan Singh) ವಿರುದ್ಧದ ಪ್ರಥಮ ಮಾಹಿತಿ ವರದಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153A ಅನ್ನು ಸೇರಿಸಿದ್ದಾರೆ. ಇದು ಧರ್ಮ, ಹುಟ್ಟಿದ ಸ್ಥಳ, ನಿವಾಸ, ಭಾಷೆ,ಜನಾಂಗ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸವುದಕ್ಕೆ ಸಂಬಂಧಿಸಿದೆ.

ಆರೋಪಿಯ ಬಂಧನದ ವೇಳೆ ಪೊಲೀಸರು ಇಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ನ್ಯಾಯಾಲಯ ಆರೋಪಿಯನ್ನು ಆಗಸ್ಟ್ 11ರವರೆಗೆ ಪೊಲೀಸ್ ಕಸ್ಟಡಿ ನೀಡಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ), ಶಸ್ತ್ರಾಸ್ತ್ರ ಕಾಯಿದೆ 3, 25, 27 ಮತ್ತು ರೈಲ್ವೇಸ್ ಆಕ್ಟ್ ಕೂಡ ಸೇರಿದೆ.

ರೈಲಿನಲ್ಲಿ ಚೇತನ್ ಸಿಂಗ್ ಗುಂಡು ಹಾರಿಸಿ ವ್ಯಕ್ತಿಯ ರಕ್ತಸಿಕ್ತ ದೇಹವನ್ನು ಕೆಳಗೆ ಬಿದ್ದಿರುವಾಗ ಪಾಕಿಸ್ತಾನ ಮತ್ತು ದೇಶೀಯ ರಾಜಕೀಯ ವಿಷಯಗಳನ್ನು ಪ್ರಸ್ತಾಪಿಸಿ ಕೋಮು ದ್ವೇಷದ ಭಾಷಣ ಮಾಡುತ್ತಿರುವುದನ್ನು ಪ್ರಯಾಣಿಕರು ರೆಕಾರ್ಡ್ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೊದಲ್ಲಿ ಆರೋಪಿ ಪಾಕಿಸ್ತಾನ, ಭಾರತೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು “ಠಾಕ್ರೆ” ಹೆಸರನ್ನು ಉಲ್ಲೇಖಿಸಿದ್ದಾನೆ. ಈ ವಿಡಿಯೊದ ಸತ್ಯಾಸತ್ಯತೆಯನ್ನು ಅಧಿಕಾರಿಗಳು ಇದುವರೆಗೆ ನಿರಾಕರಿಸಿಲ್ಲ.

“…ಅಗರ್ ವೋಟ್ ದೇನಾ ಹೈ, ಅಗರ್ ಹಿಂದೂಸ್ತಾನ್ ಮೆ ರೆಹನಾ ಹೈ, ತೋ ಮೈ ಕೆಹತಾ ಹೂ, ಮೋದಿ ಔರ್ ಯೋಗಿ, ಯೇ ದೋ ಹೈ, ಔರ್ ಆಪ್ಕೆ ಠಾಕ್ರೆ” (ನೀವು ಮತ ಚಲಾಯಿಸಲು ಬಯಸಿದರೆ, ನೀವು ಭಾರತದಲ್ಲಿ ವಾಸಿಸಲು ಬಯಸಿದರೆ, ನಾನು ಹೇಳುತ್ತಿದ್ದೇನೆ ಮೋದಿ ಮತ್ತು ಯೋಗಿ, ಇವರಿಬ್ಬರು ಮತ್ತು ನಿಮ್ಮ ಠಾಕ್ರೆ’) ಎಂದು ಅವರು ವಿಡಿಯೊದಲ್ಲಿ ಹೇಳುವುದನ್ನು ಕೇಳಬಹುದು.

ಚೇತನ್ ಸಿಂಗ್ ಗುಂಡಿಕ್ಕಿ ಕೊಂದವರಲ್ಲಿ ಮೂವರು ಮುಸ್ಲಿಮರು. ಆರೋಪಿಯು ಮೊದಲು ತನ್ನ ಮೇಲಧಿಕಾರಿಯಾದ ಸಬ್ ಇನ್ಸ್‌ಪೆಕ್ಟರ್ ಟಿಕಾ ರಾಮ್ ಮೀನಾಗೆ ಗುಂಡು ಹಾರಿಸಿದ್ದು, ನಂತರ ಕೋಚ್‌ನಿಂದ ಕೋಚ್‌ಗೆ ಹೋಗಿ ಮೂವರು ಪ್ರಯಾಣಿಕರನ್ನು ಕೊಂದಿದ್ದಾನೆ. ಸಂತ್ರಸ್ತರನ್ನು ಅಬ್ದುಲ್ ಖಾದಿರ್‌ಭಾಯ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಅಖ್ತರ್ ಅಬ್ಬಾಸ್ ಅಲಿ ಮತ್ತು ಸದರ್ ಮೊಹಮ್ಮದ್ ಹುಸೇನ್ ಎಂದು ಗುರುತಿಸಲಾಗಿದೆ.

ಅಪರಾಧದ ನಂತರ ಆರೋಪಿಯನ್ನು ಮಾನಸಿಕ ಆರೋಗ್ಯ ಪರಿಶೀಲಿಸಲು ಕಳುಹಿಸಲಾಗಿದೆ. ಆರ್‌ಪಿಎಫ್ ಸಿಬ್ಬಂದಿಯ “ಸಮಗ್ರ ಮಾನಸಿಕ ಮತ್ತು ಮಾನಸಿಕ ಆರೋಗ್ಯ ಮೌಲ್ಯಮಾಪನ” ನಡೆಸಲಾಗುತ್ತಿದೆ ಎಂದು ರೈಲ್ವೇ ಸಚಿವಾಲಯದ ಮೂಲಗಳು ತಿಳಿಸಿವೆ. ಈತ ಕೋಮು ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್‌ನ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಈ ವಿಡಿಯೊ ಶೇರ್ ಮಾಡಿ “ಇದು ನಿರ್ದಿಷ್ಟವಾಗಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಭಯೋತ್ಪಾದಕ ದಾಳಿಯಾಗಿದೆ. ಇದು ನಿರಂತರ ಮುಸ್ಲಿಂ ವಿರೋಧಿ ದ್ವೇಷದ ಭಾಷಣದ ಉತ್ಪನ್ನವಾಗಿದೆ. ಅದನ್ನು ಕೊನೆಗೊಳಿಸಲು ನರೇಂದ್ರ ಮೋದಿ ಅವರಿಗೆ ಇಷ್ಟವಿಲ್ಲ. ಆರೋಪಿ RPF ಜವಾನ್ ಭವಿಷ್ಯದ ಬಿಜೆಪಿ ಅಭ್ಯರ್ಥಿಯಾಗುತ್ತಾರೆಯೇ? ಅವರ ಜಾಮೀನಿಗೆ ಸರ್ಕಾರವು ಬೆಂಬಲ ನೀಡುತ್ತದೆಯೇ? ಬಿಡುಗಡೆಯಾದಾಗ ಅವರಿಗೆ ಹಾರ ಹಾಕಲಾಗುತ್ತದೆಯೇ?”ಎಂದು ಕೇಳಿದ್ದರು, ಅಧಿಕಾರಿಗಳ ಕೋರಿಕೆಯ ಮೇರೆಗೆ ಭಾರತದಲ್ಲಿ ಅವರ ಟ್ವೀಟ್ ಅನ್ನು ನಿರ್ಬಂಧಿಸಲಾಗಿದೆ.

Previous Post

ತೂಕ ಕಡಿಮೆ ಮಾಡುವ ಉತ್ಸಾಹ ಬೇಡ, ಅತಿಯಾದ ಒತ್ತಡವೂ ಹೃದಯದ ಸಮಸ್ಯೆಗಳಿಗೆ ಕಾರಣ: ಡಾ. ಮಂಜುನಾಥ್

Next Post

ಉಡುಪಿ ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ

Next Post
ಉಡುಪಿ ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ

ಉಡುಪಿ ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.