Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಕಿಮ್ಸ್‌ ದಾದಿಯರಿಗೆ ಅವಮಾನಿಸಿ ರೀಲ್ಸ್‌ ಮಾಡಿದ 15 ವೈದ್ಯ ವಿದ್ಯಾರ್ಥಿಗಳ ಅಮಾನತು, ತನಿಖೆ ಆರಂಭ

editor tv by editor tv
August 9, 2023
in ರಾಜ್ಯ
0
ಕಿಮ್ಸ್‌ ದಾದಿಯರಿಗೆ ಅವಮಾನಿಸಿ ರೀಲ್ಸ್‌ ಮಾಡಿದ 15 ವೈದ್ಯ ವಿದ್ಯಾರ್ಥಿಗಳ ಅಮಾನತು, ತನಿಖೆ ಆರಂಭ
1.9k
VIEWS
Share on FacebookShare on TwitterShare on Whatsapp

ಕಿಮ್ಸ್‌ನಲ್ಲಿ ದಾದಿಯರನ್ನು ಅವಮಾನಿಸಿದ ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 15ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಹುಬ್ಬಳ್ಳಿ (ಆ.9): ಕಿಮ್ಸ್‌ನಲ್ಲಿ ದಾದಿಯರನ್ನು ಅವಮಾನಿಸಿದ ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 15ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಕಿಮ್ಸ್‌ನಲ್ಲಿ ಆ. 23ರಿಂದ 26ರ ವರೆಗೆ 11ನೇ ಆವೃತ್ತಿಯ ರಾಷ್ಟ್ರಮಟ್ಟದ ಅಂತರ ಕಾಲೇಜುಗಳ ಫೆಸ್ವ್‌ ‘ಮಂಥನ್‌’ ನಡೆಯಲಿದೆ. ಇದರಲ್ಲಿ ಪ್ರದರ್ಶಿಸಲು ವಿದ್ಯಾರ್ಥಿಗಳು ಸ್ಕಿಟ್‌ ಸಿದ್ಧಪಡಿಸಿದ್ದರು. ‘ಭದ್ರ’ ಚಿತ್ರದ ಹಾಡನ್ನು ಬಳಸಿಕೊಂಡು ಸ್ಕಿಟ್‌ ಮಾಡಲಾಗಿತ್ತು. ಇದಕ್ಕೆ ಬೇಕಾದ ಚಿತ್ರೀಕರಣವನ್ನು ವಿದ್ಯಾರ್ಥಿಗಳ ತಂಡ, ಕಿಮ್ಸ್‌ ಆವರಣ ಹಾಗೂ ಆಸ್ಪತ್ರೆಯ ಭಾಗಗಳನ್ನು ಬಳಸಿಕೊಂಡಿತ್ತು. ಈ ಸ್ಕಿಟ್‌ನ್ನು ಕಾಲೇಜಿನ ಪರಿಶೀಲನಾ ಸಮಿತಿ ತಿರಸ್ಕರಿಸಿತ್ತು. ಜತೆಗೆ ಫೆಸ್ಟ್‌ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲ್ಲ ಎಂದು ಸ್ಪಷ್ಟಪಡಿಸಿತ್ತು.

ಅಲ್ಲಿ ತಿರಸ್ಕರಿಸಿದ ನಂತರ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಹರಿಬಿಡಲಾಗಿತ್ತು. ಇದನ್ನು ಶುಶ್ರೂಷಕಿಯರ ಸಂಘದ ಪದಾಧಿಕಾರಿಗಳು, ನರ್ಸಿಂಗ್‌ ಕಾಲೇಜ್‌ ಸೇರಿದಂತೆ ವಿವಿಧ ಸಂಘಟನೆಗಳು ವೀಕ್ಷಿಸಿದ್ದವು

ಇದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿ, ಸೋಮವಾರ ಕಿಮ್ಸ್‌ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದವು. ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು

ತನಿಖೆಗೆ ಸಮಿತಿ: ಈ ಪ್ರಕರಣದ ತನಿಖೆಗೆ ಕಿಮ್ಸ್‌ ನಿರ್ದೇಶಕರು ಏಳು ಜನರ ಸಮಿತಿಯನ್ನು ರಚಿಸಿದ್ದಾರೆ. ಕಿಮ್ಸ್‌ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ನೇತೃತ್ವದಲ್ಲಿ ರಚನೆಯಾದ ಈ ಸಮಿತಿಯಲ್ಲಿ ಕಿಮ್ಸ್‌ನ ಸಿಎಒ, ದಾದಿಯರ ಸಂಘದ ಜಿಲ್ಲಾಧ್ಯಕ್ಷೆ ಸುನಿತಾ ನಾಯ್‌್ಕ, ನರ್ಸಿಂಗ್‌ ಕಾಲೇಜ್‌ನ ಪ್ರಾಚಾರ್ಯ, ವಿದ್ಯಾರ್ಥಿ ಮುಖಂಡ ಸೇರಿದಂತೆ ಏಳು ಜನರು ಸಮಿತಿಯಲ್ಲಿದ್ದಾರೆ. ಈ ಸಮಿತಿ ಈಗಾಗಲೇ ತನಿಖೆಯನ್ನೂ ಪ್ರಾರಂಭಿಸಿದೆ. ಎಂಟ್ಹತ್ತು ದಿನಗಳಲ್ಲಿ ಈ ಸಮಿತಿ ವರದಿ ನೀಡಲಿದೆ.

ಸಮಿತಿ ವರದಿ ನೀಡುವವರೆಗೂ ಆ ಸ್ಕಿಟ್‌ನಲ್ಲಿ ಆ್ಯಕ್ಟ್ ಮಾಡಿದ ಹಾಗೂ ಆ ಕಲ್ಪನೆ ಸಿದ್ಧಪಡಿಸಿದ 15 ವಿದ್ಯಾರ್ಥಿಗಳನ್ನು ಅಮಾನತು ಮಾಡಿ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಆದೇಶಿಸಿದ್ದಾರೆ.

ಈ ನಡುವೆ ವಿದ್ಯಾರ್ಥಿಗಳ ತಂಡ ಕ್ಷಮೆ ಕೋರಿ ವಿಡಿಯೋ ಮಾಡಿ ಅದನ್ನು ಹರಿಬಿಟ್ಟಿದೆ. ಜತೆಗೆ ದಾದಿಯರಿಗೂ ಬಹಿರಂಗವಾಗಿಯೇ ಕ್ಷಮೆ ಕೇಳಿದೆ. ಒಟ್ಟಿನಲ್ಲಿ ಕಿಮ್ಸ್‌ನಲ್ಲೀಗ ಇನ್‌ಸ್ಟಾಗ್ರಾಮನಲ್ಲಿನ ರೀಲ್ಸ್‌ದ್ದು ಬಹುಚರ್ಚಿತ ವಿಷಯವಾದಂತಾಗಿದೆ.

ಕಿಮ್ಸ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ವರ್ತನೆ ವಿರುದ್ಧ ಪ್ರತಿಭಟನೆ
ಕೋಲಾರ: ನರ್ಸ್‌ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ನರ್ಸ್‌ಗಳಿಗೆ ಅಪಮಾನ ಮಾಡಿರುವ ಹುಬ್ಬಳ್ಳಿಯ ಕಿಮ್ಸ್‌ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ಶುಶ್ರೂಷಾಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ನಗರದ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್‌ ಕುಮಾರ್‌ ಮೂಲಕ ಆರೋಗ್ಯ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿತು.

ಸಂಘದ ಜಿಲ್ಲಾಧ್ಯಕ್ಷೆ ಎಸ್‌.ವಿಜಯಲಕ್ಷ್ಮಿ ಮಾತನಾಡಿ, ವಿಡಿಯೋದಲ್ಲಿ ನರ್ಸ್‌ಗಳನ್ನು ಅಸಭ್ಯವಾಗಿ, ಅಗೌರವಿಸುವ ರೀತಿಯಲ್ಲಿ ಮಾಡಲಾಗಿದೆ. ಈ ಮೂಲಕ ನರ್ಸ್‌ಗಳಿಗೆ ಅವಮಾನ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ವಿಡಿಯೋ ವೈರಲ್‌ ಆಗಿದೆ. ಕೂಡಲೇ ಅವಮಾನ ಮಾಡಿದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದರು.

ದಾದಿಯರಿಗೆ ಅಪಮಾನ:
ದಾದಿಯರು ಪ್ರತಿ ರೋಗಿಯನ್ನು ತಮ್ಮ ಸ್ವಂತ ಕುಟುಂಬದ ವ್ಯಕ್ತಿಯಂತೆ ಭಾವಿಸಿ ಆರೈಕೆ ಮಾಡುತ್ತಾರೆ. ಅಂತಹವರ ಕರ್ತವ್ಯ ಹೀಯಾಳಿಸುವ ರೀತಿ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್‌ ಮಾಡಿರುವುದು ಖಂಡನೀಯ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಶುಶ್ರೂಷಾಧಿಕಾರಿಗಳು ಚುಚ್ಚುಮದ್ದು ನೀಡುವುದು ಹೇಗೆ ಎಂದು ಕಲಿಸಿರುತ್ತಾರೆ. ವಿದ್ಯೆ ಕಲಿಸಿಕೊಟ್ಟನರ್ಸ್‌ಗಳ ಘನತೆಗೆ ಕುಂದು ತರುವ ಕೆಲಸವನ್ನು ಮಾಡಿರುವುದು ವಿಷಾದನೀಯ ಎಂದರು. ಈ ಸಂದರ್ಭದಲ್ಲಿ ಶುಶ್ರೂಷಾಧಿಕಾರಿಗಳಾದ ಎಂ.ಸುಮತಿ, ಬಿ.ಕೆ.ಚಂದ್ರಕಲಾ, ಮಹೇಶ್‌, ಸದಾನಂದ, ಶಿವಾರೆಡ್ಡಿ, ನಾರಾಯಣಪ್ಪ, ಮಂಜುನಾಥ್‌ ಇದ್ದರು.

Previous Post

ಕಾರ್ಕಳ: ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ

Next Post

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

Next Post
ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.