| Edited By: M. Ashraf Kammaje
Updated on:Aug 09, 2023 | 3:26 PM

ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್ನಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ
ಮಂಗಳೂರು, ಆ.9: ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಿರುವ ದುಬೈ ಮಾರ್ಕೆಟ್ನಲ್ಲಿ ಮೊಬೈಲ್ ಅಂಗಡಿ (Mobile Shop)ಗೆ ನುಗ್ಗಿದ ಯುವಕರ ಗುಂಪೊಂದು ಅಂಗಡಿ ಮಾಲೀಕನಿಗೆ ತಳಿಸಿದ ಘಟನೆ ನಡೆದಿದೆ. ಹೌದು, ಗ್ರಾಹಕನೋರ್ವ ಪವರ್ ಬ್ಯಾಂಕ್ ರಿಪೇರಿಗೆಂದು ಅಂಗಡಿಗೆ ಬಂದಿದ್ದ. ಅಂಗಡಿ ಮಾಲೀಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಬಂದಿದ್ದ ಯುವಕ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಮೊಬೈಲ್ ಅಂಗಡಿ ಮಾಲೀಕನಿಗೆ ಥಳಿಸಿ ಯುವಕರು ಪರಾರಿ
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇನ್ನು ಯುವಕ ಮಾಲೀಕನಿಗೆ ಥಳಿಸಿ, ಅಲ್ಲಿಂದ ತೆರಳಿದ್ದಾನೆ. ಇದಾದ ಬಳಿಕ ತನ್ನ ಗೆಳೆಯರ ಗುಂಪನ್ನ ಕರೆದುಕೊಂಡು ಬಂದು, ಮತ್ತೆ ಹಲ್ಲೆ ಮಾಡಿದ್ದಾನೆ. ಸುಮಾರು ಆರು ಜನರ ತಂಡದಿಂದ ಕೃತ್ಯ ಎಸಗಲಾಗಿದ್ದು, ಹಲ್ಲೆ ನಡೆಸಿದ ದೃಶ್ಯ, ಅಂಗಡಿಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

