| Edited By: Ashraf Kammaje
Updated on:Aug 15, 2023 | 9:46 AM

Manekshaw Parade Grounds: ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು. ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.

ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ದೇಶದ ಸ್ವಾತಂತ್ರ ಸಂಭ್ರಮ ವನ್ನು (independence day) ಆಚರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು. ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ಅದಕ್ಕೂ ಮುನ್ನ ಸಿಎಂ ಭಾಷಣಕ್ಕೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿತ್ತು. ಅದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ಬುಲೆಟ್ ಪ್ರೂಫ್ ಗ್ಲಾಸ್ ತೆರವು ಮಾಡುವಂತೆ ಸೂಚಿಸಿದರು. ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳು ತಕ್ಷಣ ಬುಲೆಟ್ ಪ್ರೂಫ್ ಗ್ಲಾಸ್ ತೆಗೆದರು.




