
ಹೊಸದಿಲ್ಲಿ: ಹಲವು ಸಮಯದಿಂದ ಚರ್ಚೆಯಲ್ಲಿದ್ದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಸಾಧ್ಯತೆಯ ಬಗ್ಗೆ ಅವಲೋಕಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರಚಿಸಿದೆ.
ಸಮಿತಿಯ ಸದಸ್ಯರ ಕುರಿತು ಅಧಿಸೂಚನೆಯನ್ನು ನಂತರ ಹೊರಡಿಸಲಾಗುವುದು.

ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದನ್ನು ಉಲ್ಲೇಖಿಸುತ್ತದೆ.

ಇದರರ್ಥ ಲೋಕಸಭೆ ಮತ್ತು ಭಾರತದಾದ್ಯಂತ ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಯುತ್ತವೆ.
ಸಂಸತ್ತಿನ ವಿಶೇಷ ಅಧಿವೇಶನವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂಬತ್ತು ವರ್ಷಗಳಲ್ಲಿ ಮೊದಲ ವಿಶೇಷ ಅಧಿವೇಶನವಾಗಿದೆ.
